ಸೋಷಿಯಲ್ ಕ್ಲಬ್ ಅಧ್ಯಕ್ಷರಾಗಿ ಕೆ.ಎಂ.ಹೊನ್ನಪ್ಪ

01.2 (1)
ಕೆ.ಎಂ. ಹೊನ್ನಪ್ಪ
Published on

ಹೊಳೆನರಸೀಪುರ: ಪಟ್ಟಣದ ಸೋಷಿಯಲ್ ಕ್ಲಬ್ ನೂತನ ಅಧ್ಯಕ್ಷರಾಗಿ ಉದ್ಯಮಿ ಕೆ.ಎಂ. ಹೊನ್ನಪ್ಪ ಆಯ್ಕೆಯಾಗಿದ್ದಾರೆ.

ಇತ್ತೀಚೆಗೆ ನೂತನ ಪದಾಧಿಕಾರಿಗಳ ಆಯ್ಕೆ ನಡೆದಿದ್ದು, ಕೆ.ಎ. ಸುದರ್ಶನ್‌ಬಾಬು ಕಾರ್ಯದರ್ಶಿಯಾಗಿ, ವಿಜಯಕುಮಾರ್ ಖಜಾಂಚಿಯಾಗಿ ಸರ್ವಾನುಮತದಿಂದ ಆಯ್ಕೆಯಾಗಿದ್ದಾರೆ.

ನೂತನ ಅಧ್ಯಕ್ಷ ಹೊನ್ನಪ್ಪ ಮಾತನಾಡಿ, ನಮ್ಮ ಕ್ಲಬ್ ಪ್ರಾರಂಭವಾದ ದಿನದಿಂದ ಅನೇಕ ಸಮಾಜ ಸೇವಾ ಕಾರ್ಯಗಳನ್ನು ಮಾಡುತ್ತಿದೆ. ಪ್ರತಿ ವರ್ಷ ಸ್ವಾತಂತ್ರೊೃೀತ್ಸವ ಕಾಯಕ್ರಮದಲ್ಲಿ ಭಾಗವಹಿಸುವ ಸಾವಿರಾರು ವಿದ್ಯಾರ್ಥಿಗಳಿಗೆ, ಶಿಕ್ಷಕರಿಗೆ, ಅಧಿಕಾರಿಗಳಿಗೆ ಉಪಾಹಾರದ ವ್ಯವಸ್ಥೆ ಮಾಡಲಾಗುತ್ತಿದೆ.

ಈ ಸೇವೆಯನ್ನು ಮುಂದುವರಿಸುತ್ತೇವೆ. ಅಂತೆಯೆ, ಎಸ್ಸೆಸ್ಸೆಲ್ಸಿ ಹಾಗೂ ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ಹೆಚ್ಚು ಅಂಕಗಳಿಸಿದ ಕ್ಲಬ್ ಸದಸ್ಯರ ಮಕ್ಕಳ ಪ್ರತಿಭಾ ಪುರಸ್ಕಾರ ಕಾರ್ಯಕ್ರಮ, ಹೊಸವರ್ಷ ಆಚರಣೆಯ ಕಾರ್ಯಕ್ರಮಗಳನ್ನು ಮುಂದುವರಿಸುವುದರ ಜತೆಗೆ, ಈ ಬಾರಿ ಕ್ರೀಡೆಗೆ ಹೆಚ್ಚಿನ ಪ್ರೋತ್ಸಾಹ ನೀಡುವ ಕಾಯಕ್ರಮಗಳನ್ನು ಸದಸ್ಯರ ಅಭಿಪ್ರಾಯ ಪಡೆದು ಆಯೋಜಿಸಲಾಗುವುದು ಎಂದು ತಿಳಿಸಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net