

ಗೋಣಿಕೊಪ್ಪ: ಕೊಡವ ಮುಸ್ಲಿಂ ಅಸೋಸಿಯೇಷನ್(ಕೆಎಂಎ) ವತಿಯಿಂದ ಕೊಡವ ಮುಸ್ಲಿಂ ಶಿಕ್ಷಣ ನಿಧಿಯ (ಕೆಎಂಇಎಫ್) ಸಹಯೋಗದಲ್ಲಿ ಸಂಸ್ಥೆಯ ಸದಸ್ಯರ ಪ್ರತಿಭಾನ್ವಿತ ಮಕ್ಕಳಿಗಳಿಂದ ಕೆಎಂಎ ಪ್ರತಿಭಾ ಪುರಸ್ಕಾರಕ್ಕೆ ಅರ್ಜಿ ಆಹ್ವಾನಿಸಲಾಗಿದೆ.
ಎಸ್‌ಎಸ್‌ಎಲ್‌ಸಿ ಮತ್ತು ಪಿಯುಸಿ ಪರೀಕ್ಷೆಯಲ್ಲಿ ಅತಿ ಹೆಚ್ಚಿನ ಅಂಕ ಪಡೆದವರು ಅರ್ಜಿ ಸಲ್ಲಿಸಬಹುದು. ಅರ್ಜಿ ಸಲ್ಲಿಸುವ ವಿದ್ಯಾರ್ಥಿಗಳ ಪಾಲಕರ ಪೈಕಿ ಒಬ್ಬರು (ತಂದೆ ಅಥವಾ ತಾಯಿ) ಕೆ.ಎಂ.ಎ. ಸದಸ್ಯತ್ವ ಪಡೆದು ಕನಿಷ್ಠ ಒಂದು ವರ್ಷ ಪೂರ್ಣಗೊಂಡಿರಬೇಕು.
ಅಧ್ಯಕ್ಷರು, ಕೊಡವ ಮುಸ್ಲಿಂ ಅಸೋಸಿಯೇಷನ್, ಪ್ರಧಾನ ಕಚೇರಿ, ಡಿ.ಎಚ್.ಎಸ್. ಕಟ್ಟಡ, ಮುಖ್ಯ ರಸ್ತೆ, ವಿರಾಜಪೇಟೆ, ಕೊಡಗು ಜಿಲ್ಲೆ, 571218 ಈ ವಿಳಾಸಕ್ಕೆ ಅರ್ಜಿ ಸಲ್ಲಿಸಬೇಕು. ಹೆಚ್ಚಿನ ಮಾಹಿತಿಗಾಗಿ ಮೊ: 9886060342 (ಪ್ರಧಾನ ಕಾರ್ಯದರ್ಶಿ) ಸಂಪರ್ಕಿಸಬಹುದು ಎಂದು ಕೊಡವ ಮುಸ್ಲಿಂ ಅಸೋಸಿಯೇಷನ್ (ಕೆ.ಎಂ.ಎ.) ಅಧ್ಯಕ್ಷ ದುದ್ದಿಯಂಡ ಎಚ್.ಸೂಫಿ ಹಾಜಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.