ಸುಪ್ತವಾಗಿ ಅಡಗಿರುವ ಪ್ರತಿಭೆಯನ್ನು ಗುರುತಿಸಿ

17KMD-1
Published on

ಗ್ರಾಮ ಪಂಚಾಯತಿ ಅಧ್ಯಕ್ಷೆ ಶಿಲ್ಪಾ ಸಲಹೆ
ಕೆ.ಎಂ.ದೊಡ್ಡಿ : ವಿದ್ಯಾರ್ಥಿಗಳಲ್ಲಿ ಸುಪ್ತವಾಗಿ ಅಡಗಿರುವ ಪ್ರತಿಭೆಯನ್ನು ಗುರುತಿಸಲು ಶಿಕ್ಷಕರು ಮುಂದಾಗಬೇಕೆಂದು ಗ್ರಾಮ ಪಂಚಾಯತಿ ಅಧ್ಯಕ್ಷೆ ಶಿಲ್ಪಾ ಹೇಳಿದರು. ಸಮೀಪದ ಮೆಣಸಗೆರೆ ಸರಕಾರಿ ಪ್ರಾಥಮಿಕ ಶಾಲೆ ಆವರಣದಲ್ಲಿ ಮಂಗಳವಾರ ಹಮ್ಮಿಕೊಂಡಿದ್ದ ತೊರೆಬೊಮ್ಮನಹಳ್ಳಿ ಕ್ಲಸ್ಟರ್ ಮಟ್ಟದ ಪ್ರತಿಭಾಕಾರಂಜಿ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು. ಆಧುನಿಕ ಯುಗದಲ್ಲಿ ಪಠ್ಯದ ಜೊತೆಗೆ ಪಠ್ಯೇತರ ಚಟುವಟಿಕೆಗಳು ವಿದ್ಯಾರ್ಥಿಗಳ ಬೆಳವಣಿಗೆಗೆ ಅತ್ಯವಶ್ಯಕ ಎಂದರು.
ಮಕ್ಕಳಲ್ಲಿರುವ ಪ್ರತಿಭೆಯನ್ನು ಅನಾವರಣಗೊಳಿಸುವುದೇ ಪ್ರತಿಭಾ ಕಾರಂಜಿಯ ಉದ್ದೇಶ. ುಕ್ಕಳು ಪಠ್ಯ ಜೊತೆಗೆ ಪಠ್ಯೇತರ ಚಟುವಟಿಕೆಗಳಲ್ಲೂ ಆಸಕ್ತಿಯಿಂದ ಭಾಗವಹಿಸಿ ಅಭಿನಯ, ಸಂಗೀತ, ನಾಟಕ, ಮಿಮಿಗ್ರಿ ಸೇರಿದಂತೆ ತಮ್ಮಲ್ಲಿನ ಪ್ರತಿಭೆ ಪ್ರದರ್ಶಿಸಲು ವೇದಿಕೆಯಾಗಿರುವ ಪ್ರತಿಭಾ ಕಾರಂಜಿ ಮಕ್ಕಳ ಸವಾರ್ಂಗೀಣ ಅಭಿವೃದ್ಧಿಗೆ ಸಹಕಾರಿಯಾಗಿದೆ ಎಂದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net