

ಕೆ.ಎಂ.ದೊಡ್ಡಿ : ಲೋಕಸಭೆ ಚುನಾವಣೆಯಲ್ಲಿ ಮಂಡ್ಯ ಕ್ಷೇತ್ರದ ಅಭ್ಯರ್ಥಿ ಸ್ಟಾರ್ ಚಂದ್ರು ಅವರಿಗೆ ಮದ್ದೂರು ಕ್ಷೇತ್ರದಿಂದ ಹೆಚ್ಚಿನ ಬಹುಮತ ನೀಡಬೇಕು ಎಂದು ಶಾಸಕ ಕದಲೂರು ಉದಯ್ ಹೇಳಿದರು.
ಚುನಾವಣೆ ಹಿನ್ನ್ನೆಲೆಯಲ್ಲಿ ಮಾಜಿ ಶಾಸಕಿ ಮಲ್ಲಾಜಮ್ಮ ಅವರ ನಿವಾಸಕ್ಕೆ ಭಾನುವಾರ ಮುಖಂಡರೊಂದಿಗೆ ತೆರಳಿ ಪ್ರಸ್ತುತ ರಾಜಕೀಯ ಬೆಳವಣಿಗೆ ಬಗ್ಗೆ ಅವರು ಚರ್ಚಿಸಿದರು. ಮಲ್ಲಾಜಮ್ಮ ಶಾಸಕರಾಗಿ, ವಿಧಾನ ಪರಿಷತ್ ಸದಸ್ಯರಾಗಿ, ಕಾಂಗ್ರೆಸ್ ರಾಜ್ಯಘಟಕದ ಪದಾಧಿಕಾರಿಯಾಗಿ ರಾಜಕೀಯದಲ್ಲಿ ಸಾಕಷ್ಟು ಅನುಭವ ಹೊಂದಿದ್ದಾರೆ. ಹಾಗಾಗಿ ಪಕ್ಷದ ಅಭ್ಯರ್ಥಿ ಸ್ಟಾರ್ ಚಂದ್ರು ಗೆಲುವಿಗೆ ಸಹಕಾರ ನೀಡಲು ಕೋರಿದರು.
ಮಾಜಿ ಶಾಸಕಿ ಮಲ್ಲಾಜಮ್ಮ ಮಾತನಾಡಿ, ಬಿಜೆಪಿಯ ಜನ ವಿರೋಧಿ ನೀತಿಗಳನ್ನು ಜನರಿಗೆ ತಿಳಿಸಬೇಕು ಕಾಂಗ್ರೆಸ್ ಪಕ್ಷ ನೀಡುತ್ತಿರುವ 5 ಗ್ಯಾರಂಟಿಗಳು ನಮ್ಮ ಪಕ್ಷದ ಅಭ್ಯರ್ಥಿ ಸ್ಟಾರ್ ಚಂದ್ರು ಅವರಿಗೆ ವರದಾನವಾಗಲಿವೆ. ಪ್ರತಿ ಗ್ರಾಮಗಳಿಗೆ ಕಾಂಗ್ರೆಸ್ ಕಾರ್ಯಕರ್ತರು ತೆರಳಿ ಕಾಂಗ್ರೆಸ್ ಸರ್ಕಾರದ ಯೋಜನೆಗಳನ್ನು ಜನರಿಗೆ ತಿಳಿಸಬೇಕು ಎಂದರು.
ಉತ್ತಮ ಆಡಳಿತ:ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ನೇತೃತ್ವದಲ್ಲಿ ಕಾಂಗ್ರೆಸ್ ಪಕ್ಷ ರಾಜ್ಯದಲ್ಲಿ ಉತ್ತಮ ಆಡಳಿತ ನೀಡುತ್ತಿದೆ. ಲೋಕಸಭೆ ಚುನಾವಣೆಯಲ್ಲಿ ರಾಜ್ಯದಲ್ಲಿ 20 ಸ್ಥಾನ ಗಳಿಸಲಿದೆ. ಮಂಡ್ಯ ಕ್ಷೇತ್ರದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಸ್ಟಾರ್ ಚಂದ್ರು ಗೆಲುವು ನಿಶ್ಚಿತ ಎಂದು ವಿಶ್ವಾಸ ವ್ಯಕ್ತಪಡಿಸಿದರು. ಆಟ ನಡೆಯದು: ಬಿಜೆಪಿ ಮತ್ತು ಜೆಡಿಎಸ್ ಮೈತ್ರಿ ಆಟ ಜಿಲ್ಲೆಯಲ್ಲಿ ನಡೆಯುವುದಿಲ್ಲ. ಜಿಲ್ಲೆಯ ಏಳು ಕ್ಷೇತ್ರದಲ್ಲಿ 5 ಕ್ಷೇತ್ರದಲ್ಲಿ ಕಾಂಗ್ರೆಸ್ ಶಾಸಕರಿದ್ದಾರೆ. ಉಳಿದ ಒಂದು ಕ್ಷೇತ್ರದ ಶಾಸಕರೂ ಕಾಂಗ್ರೆಸ್ ಪಕ್ಷಕ್ಕೆ ಬೆಂಬಲ ಘೊಷಣೆ ಮಾಡಿದ್ದಾರೆ. ನಮ್ಮ ವ್ಯಾಪ್ತಿಯ ಕೆ.ಆರ್.ನಗರದಲ್ಲೂ ಕಾಂಗ್ರೆಸ್ ಶಾಸಕರಿದ್ದಾರೆ. ಹಾಗಾಗಿ ಗೆಲುವು ನಮ್ಮದೇ ಎಂದರು. ಜಿ.ಪಂ. ಮಾಜಿ ಸದಸ್ಯ ಎ.ಎಸ್.ರಾಜೀವ್, ಮುಖಂಡರಾದ ಶ್ರೀಕಂಠ, ಆರ್‌ಸಿಎಸ್ ಶಿವು, ಯತೀಶ್ ಬಾಬು, ಸಂತೋಷ್, ಅನಿಲ್‌ಕುಮಾರ್ ಇತರರು ಇದ್ದರು.