ಬೆಮುಲ್ ಅಧ್ಯಕ್ಷರಾಗಿ ಜಾರಕಿಹೊಳಿ ಅವಿರೋಧ ಆಯ್ಕೆ?

Screenshot_20240401_120121_Google.jpg
Published on


-16ಜನ ಸದಸ್ಯರ ಆಡಳಿತ ಮಂಡಳಿ
ಬೆಳಗಾವಿ:ಇಲ್ಲಿನ ಬೆಳಗಾವಿ ಜಿಲ್ಲಾ ಸಹಕಾರಿ ಹಾಲು-ಉತ್ಪಾದಕರ  ಸಂಘಗಳ ಒಕ್ಕೂಟ  (ಬೆಮುಲ್)ದ ಮುಂದಿನ ಐದು ವರ್ಷಗಳ ಅವಧಿಗೆ ಆಡಳಿತ ಮಂಡಳಿಗೆ  ಅಧ್ಯಕ್ಷರಾಗಿ ಶಾಸಕ ಬಾಲಚಂದ್ರ ಜಾರಕಿಹೊಳಿ ಅವಿರೋಧವಾಗಿ ಆಯ್ಕೆ!
ನಗರದ ಬೆಮುಲ್ ಸಭಾಂಗಣದಲ್ಲಿ ಸೋಮವಾರ ಆಡಳಿತ ಮಂಡಳಿಯ ಅಧ್ಯಕ್ಷ ಸ್ಥಾನಕ್ಕೆ ಚುನಾವಣೆ ನಡೆಯುತ್ತಿದ್ದು, ಇಲ್ಲಿಯವರೆಗೆ ಶಾಸಕ ಬಾಲಚಂದ್ರ ಜಾರಕಿಹೊಳಿ ಒಬ್ಬರೆ ನಾಮಪತ್ರ ಸಲ್ಲಿಸಿದ್ದಾರೆ. ಒಟ್ಟು 16 ಜನ ಸದಸ್ಯರ ಪೈಕಿ ಶಾಸಕ ಬಾಲಚಂದ್ರ ಜಾರಕಿಹೊಳಿ ಬೆಂಬಲಿತ 13ಜನ ಸದಸ್ಯರು ಅವಿರೋಧವಾಗಿ ಆಯ್ಕೆಯಾಗಿದ್ದರು. ಇದೀಗ ಅಧ್ಯಕ್ಷ ಸ್ಥಾನಕ್ಕೆ ಚುನಾವಣೆ ನಡೆಯುತ್ತಿರುವ ಹಿನ್ನೆಲೆಯಲ್ಲಿ ಜಾರಕಿಹೊಳಿಗೆ ಪ್ರತಿಸ್ಪರ್ಧಿಯಾಗಿ ಯಾರು ಅಧ್ಯಕ್ಷ ಸ್ಥಾನಕ್ಕೆ ನಾಮಪತ್ರ ಸಲ್ಲಿಸದಿರುವ ಹಿನ್ನೆಲೆ ಬಹುತೇಕ ಅಧ್ಯಕ್ಷರಾಗಿ ಆಯ್ಕೆಯಾಗುವು ನಿಶ್ಚಿಳವಾಗಿದೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net