ಹಾಲು ದರ ಇಳಿಕೆ ಮಾಡದಿರಲು ಒತ್ತಡ

kmf program
Published on

ವಿಜಯವಾಣಿ ಸುದ್ದಿಜಾಲ ದೊಡ್ಡಬಳ್ಳಾಪುರ.
ರೈತರಿಂದ ಖರೀದಿ ಮಾಡುತ್ತಿರುವ ಹಾಲಿನ ದರವನ್ನು ಇಳಿಕೆ ಮಾಡದಂತೆ ಬಮುಲ್ ಮತ್ತು ಕೆಎಂಎಫ್ ಮೇಲೆ ಒತ್ತಡ ಹೇರಲಾಗಿದೆ. ಬೇಸಿಗೆಯಲ್ಲಿ ಹಾಲಿನ ಉತ್ಪಾದನೆ ಕುಂಠಿತಗೊಂಡು ರೈತರು ಸಂಕಷ್ಠದಲ್ಲಿದ್ದಾರೆ. ಹೀಗಾಗಿ ರೈತರಿಗೆ ಮತ್ತೊಂದು ಹೊರೆಯಾಗದಂತೆ ಕ್ರಮ ವಹಿಸಲಾಗುವುದು ಎಂದು ಕೆಎಂಎಫ್ ನಿರ್ದೇಶಕ ಬಿಸಿ ಆನಂದ್ ಕುಮಾರ್ ತಿಳಿಸಿದರು.
ತಾಲೂಕಿನ ಅಣಗಲಪುರದಲ್ಲಿ 18 ಲಕ್ಷ ರೂ. ವೆಚ್ಚದಲ್ಲಿ ಹಾಲು ಉತ್ಪಾದಕರ ಸಹಕಾರ ಸಂಘದ ನೂತನ ಕಟ್ಟಡ ಕಾಮಗಾರಿಗೆ ಭೂಮಿಪೂಜೆ ನೇರವೇರಿಸಿ ಮಾತನಾಡಿದರು. ಮಹಿಳೆಯರು ಸ್ವಾವಲಂಬಿಯಾಗಿ ಜೀವನ ನಡೆಸಲು ಹೈನುಗಾರಿಕೆ ಸಹಕಾರಿಯಾಗುತ್ತದೆ. ಹೈನುಗಾರಿಕೆಯಿಂದ ಬಡ ಕುಟುಂಬಗಳು ನೆಮ್ಮದಿಯಾಗಿ ಜೀವನ ಸಾಗಿಸಲು ಸಾಧ್ಯ. ಈಗಾಗಲೇ ಪ್ರತಿ ಹಳ್ಳಿಗಳಲ್ಲಿಯೂ ಜನರು ಕೃಷಿ, ಹೈನುಗಾರಿಕೆಯಿಂದ ಸಾಕಷ್ಟು ಲಾಭ ಪಡೆದು ಉತ್ತಮ ಜೀವನ ನಡೆಸುತ್ತಿದ್ದಾರೆ. ಹಾಗಾಗಿ ಪ್ರತಿಯೊಬ್ಬರೂ ಲಾಭದಾಯಕವಾದ ಕೃಷಿ ಪದ್ಧತಿಗಳನ್ನು ಅಳವಡಿಸಿಕೊಳ್ಳಬೇಕು. ಜತೆಗೆ ಸರ್ಕಾರ ಇಂಥ ಯೋಜನೆಗಳಿಗೆ ಅನುದಾನ ಹೆಚ್ಚಾಗಿ ಬಿಡುಗಡೆ ಮಾಡಿದಲ್ಲಿ ಜನರಿಗೆ ಇನ್ನಷ್ಟು ಸಹಕಾರಿಯಾಗುತ್ತದೆ ಎಂದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net