

ಬೆಂಗಳೂರು: ಎಮ್ಮೆ ಹಾಲಿಗೆ ಬೇಡಿಕೆ ಹೆಚ್ಚಾಗಿರುವ ಕಾರಣ ಕೆಎಂಎಫ್ ಮತ್ತೊಮ್ಮೆ ಕೆಎಂಎಫ್ ಎಮ್ಮೆ ಹಾಲನ್ನು ಮಾರುಕಟ್ಟೆ ಪರಿಚಯಿಸಲು ಮುಂದಾಗಿದೆ. ಇಂದು ರಾಜ್ಯದ ಮಾರುಕಟ್ಟೆಗಳಲ್ಲಿ ಕೆಎಂಎಫ್ ಎಮ್ಮೆ ಹಾಲು ಮಾರಾಟ ಶುರುವಾಗಿದೆ.ಗ್ರಾಹಕರಿಂದಲೂ ಭಾರೀ ಬೇಡಿಕೆ ಬರುತ್ತಿದೆ.
ಕೆಎಮ್ಎಫ್ ಎಮ್ಮೆ ಹಾಲಿನ ಬೆಲೆ: ಪ್ರತಿ ಲೀಟರ್ ಹಾಲಿಗೆ 60 ರೂ. ನಿಗದಿಪಡಿಸಲಾಗಿದೆ. ಹಾಲು ಒಕ್ಕೂಟಗಳಿಗೆ ಪ್ರತಿ ನಿತ್ಯ 60 ಸಾವಿರ ಲೀಟರ್ ಎಮ್ಮೆ ಹಾಲು ಪೂರೈಕೆ ಮಾಡಲಾಗುತ್ತದೆ. ರೈತರಿಂದ ಪ್ರತಿ ಲೀಟರ್‌ಗೆ 39.50 ರೂಪಾಯಿಗೆ (5 ರೂ. ಪ್ರೋತ್ಸಾಹಧನವನ್ನೊಳಗೊಂಡು) ಖರೀದಿ ಮಾಡಲಾಗುತ್ತಿದೆ.
ಕೆಎಂಎಫ್ ವತಿಯಿಂದ ಎಮ್ಮೆ ಹಾಲು ಪೂರೈಕೆ ಮಾಡುತ್ತಿರುವುದು ಇದೇ ಮೊದಲೇನಲ್ಲ. ಕೆಲ ವರ್ಷಗಳ ಹಿಂದೆ ನಂದಿನಿ ಎಮ್ಮೆ ಹಾಲನ್ನು ಮಾರುಕಟ್ಟೆಗೆ ಬಿಡಲಾಗಿತ್ತು. ಆದ್ರೆ ಪೂರೈಕೆಯಲ್ಲಿ ವ್ಯತ್ಯಯವಾದ ಹಿನ್ನೆಲೆಯಲ್ಲಿ ಕೈಬಿಡಲಾಗಿತ್ತು. ಗ್ರಾಹಕರಿಂದ ಹೆಚ್ಚುತ್ತಿರುವ ಎಮ್ಮೆಹಾಲಿನ ಬೇಡಿಕೆಯನ್ನು ಪೂರೈಸಲು, ಕರ್ನಾಟಕ ಸಹಕಾರ ಹಾಲು ಉತ್ಪಾದಕರ ಒಕ್ಕೂಟ (ಕೆಎಂಎಫ್) ಎಮ್ಮೆ ಹಾಲು ಮಾರಾಟ ಮಾಡಲು ಸಿದ್ಧವಾಗಿದೆ. ಸದ್ಯ ಬೆಂಗಳೂರು ಸೇರಿದಂತೆ ಗೋವಾ, ಆಂಧ್ರಪ್ರದೇಶ, ಮಹಾರಾಷ್ಟ್ರ ಮಾರುಕಟ್ಟೆಗಳಲ್ಲಿಯೂ ಎಮ್ಮೆ ಹಾಲು ಮಾರಾಟಕ್ಕೆ ಕೆಎಂಎಫ್ ನಿರ್ಧಾರ ಮಾಡಿದೆ.
ಕೆಎಂಎಫ್ ಎಮ್ಮೆ ಹಾಲಿಗೆ ಬೇಡಿಕೆ ಉಂಟಾಗಿದ್ದು, ಎಮ್ಮೆ ಹಾಲಿಗೆ ಬೆಂಗಳೂರು ಸೇರಿ ದಕ್ಷಿಣ ಕರ್ನಾಟಕದಲ್ಲಿ ಹೆಚ್ಚು ಬೇಡಿಕೆ ಇದೆ. ಮಾರುಕಟ್ಟೆ ಮತ್ತು ಬೇಡಿಕೆಗೆ ಅನುಗುಣವಾಗಿ ಎಮ್ಮೆ ಹಾಲು ಸಂಗ್ರಹಿಸಲಾಗುತ್ತದೆ.