ಚಾಕು ಇರಿದವನಿಗೆ 4 ವರ್ಷ ಸಜೆ

4 smg jameel
Published on

ಶಿವಮೊಗ್ಗ: ಭದ್ರಾವತಿ ತಾಲೂಕಿನ ಕಾಗೇಕೋಡಮಗ್ಗೆಯಲ್ಲಿ ಚಾಕುವಿನಿಂದ ಇರಿದು ಕೊಲೆಗೆ ಯತ್ನಿಸಿದ್ದ ವ್ಯಕ್ತಿಗೆ 4ನೇ ಜಿಲ್ಲಾ ಹೆಚ್ಚುವರಿ ಮತ್ತು ಸತ್ರ ನ್ಯಾಯಾಲಯದ ಭದ್ರಾವತಿ ಪೀಠಾಸೀನವು ನಾಲ್ಕು ವರ್ಷ ಸಾದಾ ಕಾರಾಗೃಹ ಶಿಕ್ಷೆ ಮತ್ತು 40 ಸಾವಿರ ರೂ. ದಂಡ ವಿಧಿಸಿ ತೀರ್ಪು ನೀಡಿದೆ.

ಕಾಗೇಕೋಡಮಗ್ಗೆಯ ಜಮೀಲ್ ಅದೇ ಗ್ರಾಮದ ಸೈಯದ್ ಮುಸ್ತಾಕ್ ಎಂಬಾತನಿಗೆ 2018ರ ಸೆ.16ರಂದು ಚಾಕುವಿನಿಂದ ಇರಿದು ಕೊಲೆಗೆ ಯತ್ನಿಸಿದ್ದ. ಪ್ರಕರಣ ದಾಖಲಿಸಿಕೊಂಡಿದ್ದ ಅಂದಿನ ತನಿಖಾಧಿಕಾರಿ, ಭದ್ರಾವತಿ ಗ್ರಾಮಾಂತರ ಠಾಣೆ ಪಿಎಸ್‌ಐ ಸುನೀಲ್‌ಕುಮಾರ್ ನ್ಯಾಯಾಲಯಕ್ಕೆ ದೋಷಾರೋಪ ಪಟ್ಟಿ ಸಲ್ಲಿಸಿದ್ದರು.

ವಿಚಾರಣೆ ನಡೆಸಿದ ನ್ಯಾಯಾಧೀಶ ಶಶಿಧರ್ ಅವರು ಜಮೀಲ್ ಮೇಲಿನ ಆರೋಪಗಳು ಸಾಬೀತಾಗಿದ್ದರಿಂದ 4 ವರ್ಷ ಜೈಲು, 40 ಸಾವಿರ ರೂ. ದಂಡ ವಿಧಿಸಿದ್ದಾರೆ. ಸರ್ಕಾರದ ಪರವಾಗಿ ಸರ್ಕಾರಿ ಅಭಿಯೋಜಕಿ ರತ್ನಮ್ಮ ವಾದ ಮಂಡಿಸಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net