

ಜಿಲ್ಲಾಧಿಕಾರಿ ಕಚೇರಿಯಲ್ಲಿ ಶ್ರೀಕೃಷ್ಣ ಜಯಂತಿ ಆಚರಣೆ
ಹೊಸಪೇಟೆ: ಜಿಲ್ಲಾಡಳಿತ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಯೋಗದೊಂದಿಗೆ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಬುಧವಾರ ಶ್ರೀಕೃಷ್ಣ ಜನ್ಮಾಷ್ಟಮಿಯನ್ನು ಆಚರಿಸಲಾಯಿತು.
ಶಾಸಕ ಎಚ್.ಆರ್.ಗವಿಯಪ್ಪ, ಜಿಲ್ಲಾಧಿಕಾರಿ ಎಂ.ಎಸ್.ದಿವಾಕರ, ಜಿ.ಪಂ. ಸಿಇಒ ಸದಾಶಿವಪ್ರಭು ಬಿ., ಅಪರ ಜಿಲ್ಲಾಧಿಕಾರಿ ಅನುರಾಧ ಜಿ. ಅವರು ಶ್ರೀಕೃಷ್ಣನ ಭಾವಚಿತ್ರಕ್ಕೆ ವಿಶೇಷ ಪೂಜೆ ಸಲ್ಲಿಸಿದರು.
ಅಪರ ಜಿಲ್ಲಾಧಿಕಾರಿ ಅನುರಾಧ ಜಿ. ಮಾತನಾಡಿ, ಮಹಾಭಾರತದಲ್ಲಿ ಧರ್ಮದ ಪರವಾಗಿದ್ದ ಶ್ರೀಕೃಷ್ಣ, ಕುರುಕ್ಷೇತ್ರದಲ್ಲಿ ಪಾಂಡವರನ್ನು ಗೆಲ್ಲಿಸಿದರು. ಭಗವದ್ಗೀತೆಯಲ್ಲಿ ಬದುಕಿನ ಸಾರವೇ ಅಡಗಿದೆ. ಕೃಷ್ಣ ಭೋದಿಸಿದ ಭಗವದ್ಗೀತೆಯಲ್ಲಿನ ತತ್ವ ಆದರ್ಶ ಗಳಂತೆ ಜೀವನ ರೂಪಿಸಿಕೊಳ್ಳಬೇಕು ಎಂದು ಸಲಹೆ ನೀಡಿದರು.
ಶ್ರೀಕೃಷ್ಣ ಜನ್ಮಾಷ್ಠಮಿ ಕುರಿತು ಕಲ್ಲಂ ಭಟ್ ವಿಶೇಷ ಉಪನ್ಯಾಸ ನೀಡಿದರು.
ವಿವಿಧ ಸಮಾಜದ ಮುಖಂಡರು ಹಾಗೂ ವಿವಿಧ ಇಲಾಖೆಗಳ ಅಧಿಕಾರಿಗಳು ಪಾಲ್ಗೊಂಡಿದ್ದರು.