ಐತಿಹಾಸಿಕ ಸ್ಥಳಗಳ ಇತಿಹಾಸ ತಿಳಿಯಲಿ

Published on

ಬಳ್ಳಾರಿ: ಪ್ರವಾಸ ಕೈಗೊಳ್ಳುವುದರಿಂದ ಐತಿಹಾಸಿಕ ಸ್ಥಳಗಳ ಬಗ್ಗೆ ಮಾಹಿತಿ ಹೊಂದಲು ಸಹಾಯಕವಾಗುತ್ತದೆ ಎಂದು ಡಿಡಿಪಿಐ ಬಿ.ಉಮಾದೇವಿ ಹೇಳಿದರು.

ಇಲ್ಲಿನ ಹೊಸ ಡಿಸಿ ಕಚೇರಿಯ ಆವರಣದಲ್ಲಿ ಪ್ರವಾಸೋದ್ಯಮ ಇಲಾಖೆ ವತಿಯಿಂದ ಶುಕ್ರವಾರ ಹಮ್ಮಿಕೊಂಡಿದ್ದ ಪ್ರಸ್ತಕ ಸಾಲಿನ ಎಸ್ಸಿಎಸ್ಪಿ-ಟಿಎಸ್ಪಿ ಯೋಜನೆಯಡಿ ಕೈಗೊಂಡಿರುವ ಸರ್ಕಾರಿ ಶಾಲಾ ವಿದ್ಯಾರ್ಥಿಗಳ ಕರ್ನಾಟಕ ದರ್ಶನ ಪ್ರವಾಸ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿದರು. ಜಿಲ್ಲೆಯಿಂದ ಪರಿಶಿಷ್ಟ ಜಾತಿಯ 270, ಪರಿಶಿಷ್ಟ ಪಂಗಡದ 309 ವಿದ್ಯಾರ್ಥಿಗಳು ಸೇರಿದಂತೆ ಒಟ್ಟು 579 ವಿದ್ಯಾರ್ಥಿಗಳ ಗುರಿ ನಿಗದಿಪಡಿಸಲಾಗಿದ್ದು, ಅದರಂತೆ ಪ್ರವಾಸಕ್ಕೆ ಮೊದಲ ಹಂತದಲ್ಲಿ 8, 9 ನೇ ತರಗತಿಯ 154 ವಿದ್ಯಾರ್ಥಿಗಳನ್ನು ಆಯ್ಕೆ ಮಾಡಲಾಗಿದೆ ಎಂದು ಹೇಳಿದರು.

ಪ್ರವಾಸೋದ್ಯಮ ಇಲಾಖೆಯ ಉಪನಿರ್ದೇಶಕ ಪ್ರಭುಲಿಂಗ ಎಸ್.ತಳಕೇರಿ ಮಾತನಾಡಿ, ಒಟ್ಟು ನಾಲ್ಕು ದಿನಗಳ ಪ್ರವಾಸದಲ್ಲಿ ಚಿತ್ರದುರ್ಗ, ಬೇಲೂರು, ಯಗಚಿ, ಹಳೆಬೀಡು, ಶ್ರವಣಬೆಳಗೊಳ, ತಲಕಾವೇರಿ, ಮಡಿಕೇರಿ, ಬೈಲುಕುಪ್ಪೆ, ಮೈಸೂರು, ಶ್ರೀರಂಗಪಟ್ಟಣ ಸೇರಿದಂತೆ ವಿವಿಧ ಪ್ರವಾಸಿ ತಾಣಗಳನ್ನು ಸಂದರ್ಶಿಸುವರು ಎಂದು ತಿಳಿಸಿದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net