ರಸಪ್ರಶ್ನೆ ಕಾರ್ಯಕ್ರಮಗಳಿಂದ ಜ್ಞಾನ ವೃದ್ಧಿ

IMG-20251025-WA0009
ತಾಲೂಕು ಮಟ್ಟದ ಗ್ರಾಮೀಣ ಐಟಿ ರಸಪ್ರಶ್ನೆ ಕಾರ್ಯಕ್ರಮದಲ್ಲಿ ಸಿ.ಆರ್.ದಿನೇಶ್ ಮಾತನಾಡಿದರು.
Published on

ನಂಜನಗೂಡು: ಗ್ರಾಮೀಣ ಭಾಗದಲ್ಲಿ ಐಟಿ ರಸಪ್ರಶ್ನೆ ಕಾರ್ಯಕ್ರಮಗಳು ಗ್ರಾಮೀಣ ವಿದ್ಯಾರ್ಥಿಗಳಿಗೆ ಜ್ಞಾನ, ತಂತ್ರಜ್ಞಾನ ಅಭಿವೃದ್ಧಿಗೆ ನಾಂದಿ ಎಂದು ಸಿ.ಆರ್.ದಿನೇಶ್ ಹೇಳಿದರು.

ಪಟ್ಟಣದಲ್ಲಿ ಇತ್ತೀಚೆಗೆ ಆಯೋಜಿಸಿದ್ದ ತಾಲೂಕು ಮಟ್ಟದ ಗ್ರಾಮೀಣ ಐಟಿ ರಸಪ್ರಶ್ನೆ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಅವರು, ಸ್ಪರ್ಧಾತ್ಮಕ ಮನೋಭಾವವನ್ನು ಬೆಳೆಸುವ ಮೂಲಕ ಇಂತಹ ಕ್ವಿಜ್ ಕಾರ್ಯಕ್ರಮಗಳು ವಿದ್ಯಾರ್ಥಿಗಳಲ್ಲಿ ಜ್ಞಾನ, ತಯಾರಿ, ಪರಿಣಯಶೀಲತೆಯನ್ನು ಎತ್ತಿಹಿಡಿಯುತ್ತದೆ ಎಂದರು.

ರಸಪ್ರಶ್ನೆಯಲ್ಲಿ ತಾಲೂಕಿನ ವಿವಿಧ ಕಾಲೇಜಿನ ವಿದ್ಯಾರ್ಥಿಗಳು ಭಾಗವಹಿಸಿದ್ದರು. ಎಸ್.ಸಿಂಧು(ಪ್ರ), ಅರ್ಜುನ್(ದ್ವಿ), ಬಿಂಸುಶ್ರೀ(ತೃ) ಸ್ಥಾನ ಪಡೆದರು. ಕಾರ್ಯಕ್ರಮದಲ್ಲಿ ಉಪನ್ಯಾಸಕರಾದ ಲಿಂಗಣ್ಣ ಸ್ವಾಮಿ, ಡಾ.ಟಿ.ಕೆ ರವಿ, ಚಿನ್ನಸ್ವಾಮಿ, ಆಯಿಶಾ, ಎಚ್.ಕೆ.ಸ್ವಾಮಿಗೌಡ, ಸಹನಾ, ನಾಗರಾಜು ಇದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net