

ಶೃಂಗೇರಿ: ವಿಶ್ವದಾದ್ಯಂತ ಎಲ್ಲ ಕ್ಷೇತ್ರಗಳಲ್ಲೂ ಕೃತಕ ಬುದ್ಧಿಮತ್ತೆ ಉಪಯೋಗಿಸುತ್ತಿದ್ದು, ಇದರಿಂದ ವಿದ್ಯಾರ್ಥಿಗಳ ಬೌದ್ಧಿಕ ಮಟ್ಟವೃದ್ಧಿ ಆಗುತ್ತಿದೆ. ಔದ್ಯೋಗಿಕವಾಗಿ ವಿದ್ಯಾರ್ಥಿಗಳನ್ನು ಸಿದ್ಧಗೊಳಿಸಲು ವಿಚಾರ ಸಂಕಿರಣಗಳು ಅಗತ್ಯವಿದೆ ಎಂದು ಕುವೆಂಪು ವಿಶ್ವವಿದ್ಯಾಲಯದ ಕಂಪ್ಯೂಟರ್ ವಿಭಾಗದ ಮುಖ್ಯಸ್ಥ ಡಾ. ಎಂ.ರವಿಕುಮಾರ್ ಹೇಳಿದರು.
ಜೆಸಿಬಿಎಂ ಕಾಲೇಜಿನ ಕಂಪ್ಯೂಟರ್ ವಿಭಾಗದಿಂದ ಬುಧವಾರ ಏರ್ಪಡಿಸಿದ್ದ ಕೃತಕ ಬುದ್ಧಿಮತ್ತೆ ಹಾಗೂ ಯಂತ್ರಕಲಿಕೆ, ದತ್ತಾಂಶಗಳ ಸಂಗ್ರಹ ವಿಷಯದ ಕುರಿತು ರಾಜ್ಯಮಟ್ಟದ ಕಾರ್ಯಾಗಾರದಲ್ಲಿ ಮಾತನಾಡಿ, ತಂತ್ರಜ್ಞಾನ ಬೆಳೆದಂತೆ ಅದಕ್ಕೆ ಹೊಂದಿಕೊಳ್ಳಬೇಕು ಎಂದರು.
ಜೆಸಿಬಿಎಂ ಕಾಲೇಜಿನ ಪ್ರಾಚಾರ್ಯ ಡಾ. ಎಂ.ಸ್ವಾಮಿ ಮಾತನಾಡಿ, ಕಾಲೇಜಿನಲ್ಲಿ ಪಠ್ಯ ಹಾಗೂ ಪಠ್ಯೇತರ ಚಟುವಟಿಕೆಗಳಿಗೆ ವಿಶೇಷ ಪ್ರಾಮುಖ್ಯತೆ ನೀಡುತ್ತಿದ್ದು ವಿದ್ಯಾರ್ಥಿಗಳ ಬೌದ್ಧಿಕ ಚಿಂತನೆಗಳಿಗೆ ಪೂರಕವಾಗಿ ಕೆಲಸ ಮಾಡುತ್ತಿದೆ ಎಂದರು.
ಸಂಪನ್ಮೂಲ ವ್ಯಕ್ತಿಗಳಾಗಿ ಡಾ. ಪ್ರಕಾಶ್ ಬಿ.ಆರ್., ಡಾ. ಶೋಯಬ್ ಅಹಮದ್, ಪ್ರೊ. ಹಾಲೇಶ್ ಟಿ. ವಿದ್ಯಾರ್ಥಿಗಳಿಗೆ ವಿಶೇಷ ಉಪನ್ಯಾಸ ನೀಡಿದರು. ಕಾಲೇಜಿನ ಕಂಪ್ಯೂಟರ್ ವಿಭಾಗದ ಎಸ್.ಎಸ್.ಅಶೋಕ್, ಯು.ದಶಮಿ, ಪ್ರೊ. ಎನ್.ಎಚ್.ಲಕ್ಷ್ಮೀನಾರಾಯಣ್ ಇದ್ದರು.