ಅನುಭವದಿಂದ ಸಿಗುವ ಜ್ಞಾನ ಓದಿನಿಂದ ಸಿಗುವುದಿಲ್ಲ

bhr 2 (4)
Published on

ಬಾಳೆಹೊನ್ನೂರು: ಜೀವನದ ಕೆಲವು ಸಮಸ್ಯೆಗಳಿಗೆ ನಾವು ನಡೆದು ಬಂದ ದಾರಿ ಹಾಗೂ ತೆಗೆದು ಕೊಂಡ ನಿರ್ಧಾರಗಳೇ ಕಾರಣವಾಗಿರುತ್ತವೆ. ಅನುಭವದಿಂದ ಸಿಗುವ ಜ್ಞಾನ ಸಂಪತ್ತು ಓದಿನಿಂದ ಸಿಗುವುದಿಲ್ಲ ಎಂದು ಶ್ರೀ ರಂಭಾಪುರಿ ಡಾ.ವೀರಸೋಮೇಶ್ವರ ಜಗದ್ಗುರುಗಳು ಹೇಳಿದರು.

ರಂಭಾಪುರಿ ಪೀಠದಲ್ಲಿ ನಡೆಯುತ್ತಿರುವ 34ನೇ ವರ್ಷದ ಶ್ರಾವಣ ತಪೋನುಷ್ಠಾನ ಹಾಗೂ ಶ್ರೀ ಜಗದ್ಗುರು ರೇಣುಕ ವಿಜಯ ಪುರಾಣ ಪ್ರವಚನ ಸಮಾರಂಭದ ಸಾನ್ನಿಧ್ಯ ವಹಿಸಿ ಆಶೀರ್ವಚನ ನೀಡಿ, ಮಾನವೀಯತೆ ಎಂಬುದು ಆಕಾಶದಷ್ಟು ವಿಸ್ತಾರ. ಸಮುದ್ರದಷ್ಟೇ ವಿಶಾಲ. ಕೆಲವು ಹನಿಗಳು ಅಪವಿತ್ರಗೊಂಡರೆ ಸಮುದ್ರವೇ ಅಪವಿತ್ರವಾಗುವುದಿಲ್ಲ. ಸಂಕಷ್ಟಗಳನ್ನು ಎದುರಿಸಿದ ಮನುಷ್ಯ ಜೀವನದಲ್ಲಿ ಉನ್ನತಿ ಹೊಂದಲು ಸಾಧ್ಯ. ಗಾಢಾಂಧಕಾರದಲ್ಲಿ ಮುಳುಗಿದ ಮನುಷ್ಯನನ್ನು ಎಚ್ಚರಿಸಿ ಜಾಗೃತಿ ಮೂಡಿಸಿದ ಶ್ರೇಯಸ್ಸು ಶ್ರೀ ಜಗದ್ಗುರು ರೇಣುಕಾಚಾರ್ಯರಿಗೆ ಸಲ್ಲುತ್ತದೆ. ವೀರಶೈವ ಧರ್ಮ ಆದರ್ಶ ಮೌಲ್ಯಗಳನ್ನು ಉಳಿಸಿ ಬೆಳೆಸಿಕೊಂಡು ಬರುವುದರಲ್ಲಿ ಯಾವುದೇ ಅನುಮಾನವಿಲ್ಲ ಎಂದರು.

ಬೆಳಗ್ಗೆ ಲೋಕ ಕಲ್ಯಾಣಾರ್ಥವಾಗಿ ಶ್ರೀ ರಂಭಾಪುರಿ ಜಗದ್ಗುರುಗಳವರು ಇಷ್ಟಲಿಂಗ ಮಹಾಪೂಜಾ ನೆರವೇರಿಸಿದರು. ಶ್ರಾವಣ ಅಂಗವಾಗಿ ಕ್ಷೇತ್ರದ ಎಲ್ಲಾ ದೈವಗಳಿಗೆ ವಿಶೇಷ ಪೂಜೆ ನೆರವೇರಿಸಲಾಯಿತು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net