ಉತ್ತಮ ನಾಗರಿಕರಾಗಲು ಜ್ಞಾನ ಅತ್ಯಗತ್ಯ

NRGL VITARANE
Published on

ನರೇಗಲ್ಲ: ಗುಣಮಟ್ಟದ ಶಿಕ್ಷಣ ಪಡೆದಾಗ ಮಾತ್ರ ಸಮಾಜದಲ್ಲಿ ಉತ್ತಮ ನಾಗರಿಕನಾಗಿ ಬಾಳಲು ಸಾಧ್ಯವಾಗುತ್ತದೆ ಎಂದು ಶಿಕ್ಷಕ ಸಿ.ಕೆ. ಕೇಸರಿ ಹೇಳಿದರು.

ಸಮೀಪದ ಬೂದಿಹಾಳ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಸೋಮವಾರ ಮಕ್ಕಳಿಗೆ ಉಚಿತ ಸಮವಸ್ತ್ರ ವಿತರಿಸಿ ಅವರು ಮಾತನಾಡಿದರು.

ಸ್ಪರ್ಧಾತ್ಮಕ ಯುಗದಲ್ಲಿ ಅಕ್ಷರ ಜ್ಞಾನಕ್ಕೆ ಅತ್ಯಂತ ಮಹತ್ವವಿದೆ ಎಂಬುದನ್ನು ವಿದ್ಯಾರ್ಥಿಗಳು ಹಾಗೂ ಪಾಲಕರು ತಿಳಿದುಕೊಳ್ಳಬೇಕು. ವಿದ್ಯಾರ್ಥಿಗಳು ಸಮಯ ವ್ಯರ್ಥ ಮಾಡಬಾರದು. ಸದೃಢ, ಸುಭದ್ರ ನಾಡು ಕಟ್ಟಲು ಹಾಗೂ ಸಮಾಜದ ಗ್ರಾಮದ ಕೀರ್ತಿ ಹೆಚ್ಚಿಸಲು ವಿದ್ಯಾರ್ಥಿಗಳು ಅಕ್ಷರ ಜ್ಞಾನ ಹೊಂದುವುದು ಅವಶ್ಯಕವಾಗಿದೆ. ವಿದ್ಯಾರ್ಥಿಗಳು ಮತ್ತು ಪಾಲಕರು ಸರ್ಕಾರ ನೀಡುವ ಯೋಜನೆಗಳನ್ನು ಸದ್ಬಳಕೆ ಮಾಡಿಕೊಂಡು ಸಮಾಜ ಜೊತೆಗೆ ಸಮುದಾಯದ ಉನ್ನತಿಗೆ ಶ್ರಮಿಸಬೇಕು ಎಂದರು.

ಮುಖ್ಯಶಿಕ್ಷಕ ಬಿ.ವಿ. ದೇಸಾಯಿಪಟ್ಟಿ, ಐಶ್ವರ್ಯಾ ಬಿಂಗಿ, ದೀಪಾ ಮಾದರ, ಕಾವ್ಯಾ ಎಸ್., ಇತರರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net