ಕೋಟದ ಪಂಚವರ್ಣ ಮಹಿಳಾ ಮಂಡಲ ಆಶ್ರಯದಲ್ಲಿ ‘ಅರಿವು ನಿಮಗಿರಲಿ ನೆರವು’ ಕಾರ್ಯಕ್ರಮ

arivu
‘ಅರಿವು ನಿಮಗಿರಲಿ ನೆರವು’ 9ನೇ ಮಾಲಿಕೆ ಕಾರ್ಯಕ್ರಮವನ್ನು ಕೋಟ ಗ್ರಾಪಂ ಅಧ್ಯಕ್ಷೆ ಜ್ಯೋತಿ ಭರತ್ ಕುಮಾರ್ ಶೆಟ್ಟಿ ಉದ್ಘಾಟಿಸಿದರು
Published on

ವಿಜಯವಾಣಿ ಸುದ್ದಿಜಾಲ ಕೋಟ

ಮಹಿಳೆಯರು ಆರೋಗ್ಯದ ಬಗ್ಗೆ ಹೆಚ್ಚಿನ ಮುತುವರ್ಜಿ ವಹಿಸುವ ಅಗತ್ಯ ಇದೆ ಎಂದು ತೆಕ್ಕಟ್ಟೆ ಶ್ರೀ ದೇವಿ ಕ್ಲಿನಿಕ್ ವೈದ್ಯೆ ಡಾ.ಸುಮಂಗಲಾ ಹೇಳಿದರು.
ಕೋಟದ ಪಂಚವರ್ಣ ಮಹಿಳಾ ಮಂಡಲ ಆಶ್ರಯದಲ್ಲಿ ಮಾತೃ ಸಂಸ್ಥೆ ಪಂಚವರ್ಣ ಯುವಕ ಮಂಡಲ ಹಾಗೂ ಕೋಟ ಗ್ರಾಪಂ ಸಹಯೋಗದೊಂದಿಗೆ ‘ಅರಿವು ನಿಮಗಿರಲಿ ನೆರವು’ 9ನೇ ಮಾಲಿಕೆ ಕಾರ್ಯಕ್ರಮದಲ್ಲಿ ಮಾತನಾಡಿದರು.

ಪ್ರಸ್ತುತ ಕಾಲಘಟ್ಟದಲ್ಲಿ ಮಹಿಳೆಯರಿಗೆ ಸ್ತನ, ಗರ್ಭಕೋಶದ ಕ್ಯಾನ್ಸರ್ ಅತಿಯಾಗಿ ಕಾಣುತ್ತಿದ್ದೇವೆ. ದೈಹಿಕವಾಗಿ ವಿವಿಧ ರೋಗಗಳು ವ್ಯಾಪಿಸಿಕೊಳ್ಳುತ್ತಿದೆ. ಇದರ ಭಾಗವಾಗಿ ನಮ್ಮ ಆಹಾರ ಕ್ರಮ, ದೈನಂದಿನ ಜೀವನ ಪದ್ಧತಿ ಬಗ್ಗೆ ಹೆಚ್ಚಿನ ಜಾಗೃತಿ ವಹಿಸುವ ಅಗತ್ಯ ಇದೆ ಎಂದರು. ಹದಿಹರೆಯದ ಮಕ್ಕಳ ಸಮಸ್ಯೆ ಬಗ್ಗೆ ಮಾಹಿತಿ ನೀಡಿದರು.

ಕೋಟ ಗ್ರಾಪಂ ಅಧ್ಯಕ್ಷೆ ಜ್ಯೋತಿ ಭರತ್ ಕುಮಾರ್ ಶೆಟ್ಟಿ ಉದ್ಘಾಟಿಸಿದರು. ಪಂಚವರ್ಣ ಮಹಿಳಾ ಮಂಡಲ ಅಧ್ಯಕ್ಷೆ ಲಲಿತಾ ಪೂಜಾರಿ ಅಧ್ಯಕ್ಷತೆ ವಹಿಸಿದ್ದರು.
ಕೋಟ ಶಿಶು ಮಂದಿರದ ವ್ಯವಸ್ಥಾಪಕಿ ಭಾಗ್ಯಾ ವಾದಿರಾಜ್, ಪಂಚವರ್ಣ ಯುವಕ ಮಂಡಲ ಅಧ್ಯಕ್ಷ ಅಜಿತ್ ಆಚಾರ್, ಕಾರ್ಕಡ ಗೆಳೆಯರ ಬಳಗ ಅಧ್ಯಕ್ಷ ಕೆ.ತಾರಾನಾಥ ಹೊಳ್ಳ, ತರಬೇತುದಾರರಾದ ಆರತಿ ರಾಜ್ ಮತ್ತಿತರರು ಇದ್ದರು. ಪಂಚವರ್ಣ ಮಹಿಳಾ ಮಂಡಲ ಪ್ರಧಾನ ಕಾರ್ಯದರ್ಶಿ ವಸಂತಿ ಹಂದಟ್ಟು ಸ್ವಾಗತಿಸಿ, ಸಂಚಾಲಕಿ ಸುಜಾತಾ ಬಾಯರಿ ಪ್ರಾಸ್ತಾವನೆ ಸಲ್ಲಿಸಿ ನಿರೂಪಿಸಿದರು. ಕಾರ್ಯಾಧ್ಯಕ್ಷೆ ಕಲಾವತಿ ಅಶೋಕ್ ವಂದಿಸಿದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net