ಪ್ರಿಯಾಂಕ ಖರ್ಗೆ ಹೇಳಿಕೆಗೆ ಕೊಡಗು ಬಿಜೆಪಿ ಮಹಿಳಾ ಮೋರ್ಚಾ ಖಂಡನೆ

SHARIN SUBBAIHA
Published on

ಮಡಿಕೇರಿ: ಕಾಂಗ್ರೆಸ್ ಶಾಸಕ ಪ್ರಿಯಾಂಕ ಖರ್ಗೆ ಅವರು ಮಹಿಳೆಯರ ಬಗ್ಗೆ ಅವಹೇಳನಕಾರಿಯಾಗಿ ಮಾತನಾಡಿದ್ದು, ಇದನ್ನು ತೀವ್ರವಾಗಿ ಖಂಡಿಸುವುದಾಗಿ ಕೊಡಗು ಜಿಲ್ಲಾ ಬಿಜೆಪಿ ಮಹಿಳಾ ಮೋರ್ಚಾದ ಜಿಲ್ಲಾಧ್ಯಕ್ಷೆ ಚೋಡುಮಾಡ ಶರೀನ್ ಸುಬ್ಬಯ್ಯ ತಿಳಿಸಿದ್ದಾರೆ.


ಪತ್ರಿಕಾ ಪ್ರಕಟಣೆ ನೀಡಿರುವ ಅವರು, ಉದ್ಯೋಗದ ವಿಚಾರದಲ್ಲಿ ಸರ್ಕಾರವನ್ನು ಟೀಕಿಸುವ ನೆಪದಲ್ಲಿ ಕಾಂಗ್ರೆಸ್ ಶಾಸಕ ಮಹಿಳೆಯರ ಬಗ್ಗೆ ಹಗುರವಾಗಿ ಮಾತನಾಡಿದ್ದಾರೆ. ಇದು ರಾಜ್ಯದ ಎಲ್ಲಾ ಮಹಿಳಾ ಸಮೂಹಕ್ಕೆ ಮಾಡಿದ ಅಪಮಾನವಾಗಿದೆ. ಇವರ ಹೇಳಿಕೆ ಕಾಂಗ್ರೆಸ್ ಸಂಸ್ಕೃತಿಯನ್ನು ಪ್ರತಿಬಿಂಬಿಸಿದೆ ಎಂದು ಆರೋಪಿಸಿದ್ದಾರೆ.


ಪ್ರಿಯಾಂಗ ಖರ್ಗೆ ಅವರು ತಾವು ನೀಡಿದ ಹೇಳಿಕೆಯನ್ನು ಹಿಂದಕ್ಕೆ ಪಡೆದು ಮಹಿಳೆಯರ ಕ್ಷಮೆ ಕೇಳಬೇಕು ಮತ್ತು ಕಾಂಗ್ರೆಸ್ ಪಕ್ಷ ಇವರ ವಿರುದ್ಧ ಶಿಸ್ತು ಕ್ರಮ ಕೈಗೊಳ್ಳಬೇಕೆಂದು ಶರೀನ್ ಸುಬ್ಬಯ್ಯ ಒತ್ತಾಯಿಸಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net