ತೆನ್ನೀರ ಮೈನಾ ವಿರುದ್ಧದ ಪ್ರಕರಣ ತನಿಖೆಗೆ ತಡೆಯಾಜ್ಞೆ

Published on

ವಿಜಯವಾಣಿ ಸುದ್ದಿಜಾಲ ಮಡಿಕೇರಿ

ಕಾಂಗ್ರೆಸ್ ವಕ್ತಾರ ತೆನ್ನೀರ ಮೈನಾ ವಿರುದ್ಧ ಮೈಸೂರು ಜಿಲ್ಲಾ ವ್ಯಾಪ್ತಿಯ ಬೈಲುಕೊಪ್ಪ ಪೊಲೀಸ್ ಠಾಣೆಯಲ್ಲಿ ದಾಖಲಾಗಿದ್ದ ಕ್ರಿಮಿನಲ್ ಪ್ರಕರಣದ ತನಿಖೆಗೆ ಹೈಕೋರ್ಟ್ ತಡೆಯಾಜ್ಞೆ ನೀಡಿದೆ. ಮೈನಾ ಪರವಾಗಿ ಹೈಕೋರ್ಟ್ ಹಿರಿಯ ವಕೀಲ ಎ.ಎಸ್. ಪೊನ್ನಣ್ಣ ವಕಲತ್ತು ವಹಿಸಿದ್ದರು.

ಜಿಲ್ಲಾಧಿಕಾರಿ ಭವನ ಎದುರಿನ ತಡೆಗೋಡೆ ಕಳಪೆ ಕಾಮಗಾರಿಯ ಬಗ್ಗೆ ತನಿಖೆಗೆ ತೆನ್ನೀರ ಮೈನಾ ಕರ್ನಾಟಕ ಲೋಕಾಯುಕ್ತಕ್ಕೆ ದೂರು ಸಲ್ಲಿಸಿದ್ದರು. ಇದಕ್ಕೆ ಪ್ರತಿಯಾಗಿ ಇಂಜಿನಿಯರ್ ದೇವರಾಜ್ ಕ್ರಿಮಿನಲ್ ಪ್ರಕರಣ ದಾಖಲಿಸಿದ್ದರು.

ದುರುದ್ದೇಶದಿಂದ ಕೂಡಿದ ರಾಜಕೀಯ ಪ್ರೇರಿತ ಸುಳ್ಳು ಕೇಸ್ ನೀಡಲಾಗಿದೆ ಎಂದು ಎ.ಎಸ್. ಪೊನ್ನಣ್ಣ ನ್ಯಾಯಾಲಯದ ಗಮನ ಸೆಳೆದರು. ಈ ಹಿನ್ನೆಲೆಯಲ್ಲಿ ಪ್ರಕರಣದ ತನಿಖೆ ನ್ಯಾಯಾಲಯ ತಡೆಯಾಜ್ಞೆ ನೀಡಿದೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net