ಕಟ್ಟಡ ತೆರಿಗೆ ವಿನಾಯಿತಿಗೆ ಕೊಡಗು ಅನುದಾನ ರಹಿತ ಶಾಲೆಗಳ ಆಡಳಿತ ಮಂಡಳಿ ಒಕ್ಕೂಟ ಮನವಿ

8mdkd1 - Copy
Published on

ವಿಜಯವಾಣಿ ಸುದ್ದಿಜಾಲ ಮಡಿಕೇರಿ

ಕೊಡಗಿನಲ್ಲಿರುವ ಶಾಲಾ ಕಟ್ಟಡಗಳಿಗೆ ತೆರಿಗೆ ವಿನಾಯಿತಿ ನೀಡಬೇಕೆಂದು ಕೊಡಗು ಅನುದಾನ ರಹಿತ ಶಾಲೆಗಳ ಆಡಳಿತ ಮಂಡಳಿ ಒಕ್ಕೂಟ ದಿಂದ ಜಿಲ್ಲಾಡಳಿತಕ್ಕೆ ಮನವಿ ಮಾಡಲಾಗಿದೆ.

ಜಿಲ್ಲಾಧಿಕಾರಿ ಡಾ.ಬಿ.ಸಿ. ಸತೀಶ, ಜಿಲ್ಲಾ ಪಂಚಾಯಿತಿ ಮುಖ್ಯಕಾರ್ಯನಿರ್ವಹಣಾಧಿಕಾರಿ ಡಾ.ಎಸ್. ಆಕಾಶ್ ಅವರನ್ನು ಭೇಟಿ ಮಾಡಿದ ಒಕ್ಕೂಟದ ಅಧ್ಯಕ್ಷ ಕೊಳೇರ ಝರು ಗಣಪತಿ ನೇತೃತ್ವದ ನಿಯೋಗ ಈ ಬಗ್ಗೆ ಗಮನ ಸೆಳೆಯಿತು. ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ, ಹಿಂದುಳಿದ ಹಾಗೂ ಅಲ್ಪಸಂಖ್ಯಾತ ವಿದ್ಯಾರ್ಥಿಗಳಿಗೆ ನೀಡುತ್ತಿದ್ದ ವಿದ್ಯಾರ್ಥಿ ವೇತನ ನಿಲ್ಲಿಸಿದ್ದು, ಮತ್ತೆ ಪ್ರಾರಂಭಿಸಲು ಸರ್ಕಾರದ ಗಮನ ಸೆಳೆಯಲು ಮನವಿ ಪತ್ರ ಸಲ್ಲಿಸಲಾಯಿತು.

ಸಾರ್ವಜನಿಕ ಶಿಕ್ಷಣ ಇಲಾಖೆ ನೂತನ ಉಪನಿರ್ದೇಶಕ ದಮ್ಮಯ್ಯ ಅವರನ್ನು ಭೇಟಿ ಮಾಡಿ, ಒಕ್ಕೂಟದ ಪರವಾಗಿ ಅಭಿನಂದಿಸಲಾಯಿತು. ಈ ವೇಳೆ ಒಕ್ಕೂಟದ ಉಪಾಧ್ಯಕ್ಷ ದಾಮೋದರ, ಪ್ರಧಾನ ಕಾರ್ಯದರ್ಶಿ ಕೋಟ್ರಂಗಡ ತಿಮ್ಮಯ್ಯ, ಕಾನೂನು ಸಲಹೆಗಾರ ಎಂ.ಎಸ್. ಪೂವಯ್ಯ, ಸಮಿತಿ ಸದಸ್ಯರಾದ ಸಚಿನ್ ವಾಸುದೇವ್, ಲಿಖಿತ್ ದಾಮೋದರ್ ಇದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net