ಕಾಲೇಜುಗಳಿಗೆ ಕೊಡಗು ವಿ.ವಿ. ಕುಲಸಚಿವರ ಭೇಟಿ

Kodagu for Colleges V.V. Patriarch's visit
Published on

ಮಡಿಕೇರಿ:

ಕೊಡಗು ವಿಶ್ವವಿದ್ಯಾಲಯದ ಕುಲಸಚಿವ ಪ್ರೊ. ಸುರೇಶ ಎಂ. ಆಲಟ್ಟಿ ಶನಿವಾರ ಜಿಲ್ಲೆಯ ಕುಶಾಲನಗರ, ಮಡಿಕೇರಿ ಸೇರಿದಂತೆ ವಿವಿಧ ಸರ್ಕಾರಿ ಪ್ರಥಮ ದರ್ಜೆ ಕಾಲೇಜುಗಳಿಗೆ ಭೇಟಿ ನೀಡಿದರು.

ಕೊಡಗು ವಿಶ್ವವಿದ್ಯಾಲಯದ ಪ್ರವೇಶಾತಿ, ಯುಜಿ ಮತ್ತು ಪಿಜಿ ಪರೀಕ್ಷೆಗೆ ಮತ್ತು ಕ್ರೀಡಾ ಚಟುವಟಿಕೆಗಳಿಗೆ ಸಂಬAಧಪಟ್ಟ ವಿಚಾರಗಳನ್ನು ಚರ್ಚಿಸಿ ಪ್ರಾಧ್ಯಾಪಕರುಗಳ ಕುಂದುಕೊರತೆಗಳನ್ನ ವಿಚಾರಿಸಿ ಕೊಡಗು ವಿಶ್ವವಿದ್ಯಾಲಯದ ಬಲ ವರ್ಧನೆಗೆ ಕೊಡಗು ಜಿಲ್ಲೆಗೆ ಒಳಪಡುವ ಸರ್ಕಾರಿ ಪ್ರಥಮ ದರ್ಜೆ ಕಾಲೇಜುಗಳ ಪ್ರಾಂಶುಪಾಲರುಗಳು, ಪ್ರಾಧ್ಯಾಪಕರು ಮತ್ತು ವಿದ್ಯಾರ್ಥಿಗಳು ಕೈಜೋಡಿಸಬೇಕು ಎಂದು ಹೇಳಿದರು.

ಪ್ರಾಂಶುಪಾಲರನ್ನ ಭೇಟಿ ಮಾಡಿದ ಕುಲಸಚಿವರು ವಿವಿಧ ಸಮಸ್ಯೆಗಳ ಬಗ್ಗೆ ಸವಿವರವಾಗಿ ಚರ್ಚಿಸಿದರು. ಈ ಸಂದರ್ಭದಲ್ಲಿ ಕುಶಾಲನಗರ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಪ್ರಾಂಶುಪಾಲ ಪ್ರವೀಣ್ ಕುಮಾರ್, ಭೋದಕ ವರ್ಗ, ಮಡಿಕೇರಿ ಮಹಿಳಾ ಪ್ರಥಮ ದರ್ಜೆ ಕಾಲೇಜಿನ ಪ್ರಾಂಶುಪಾಲರಾದ ಕೋರನ ಸರಸ್ವತಿ, ಡಾ. ಕನ್ನಿಕಾ, ವೆಂಕಟೇಶ್ ಪ್ರಸನ್ನ, ಡಾ ಚೈತ್ರಾ, ಡಾ. ಕಾವೇರಿ ಮತ್ತು ಕೊಡಗು ವಿಶ್ವವಿದ್ಯಾಲಯದ ಸಂಯೋಜಕ ಡಾ. ರವಿಶಂಕರ್ ಎಂ. ಎನ್. ಡಾ. ಅರುಣ್ ಕುಮಾರ್ ಇದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net