ಕೊಡಗು ಪತ್ರಕರ್ತರ ಸಂಘದಿಂದ ಪ್ರಶಸ್ತಿಗಳಿಗೆ ಅರ್ಜಿ ಆಹ್ವಾನ

ujwal ranjiith
Published on

ಮಡಿಕೇರಿ: ಕೊಡಗು ಪತ್ರಕರ್ತರ ಸಂಘ(ರಿ)ದ ವತಿಯಿಂದ ವಾರ್ಷಿಕ ಪ್ರಶಸ್ತಿಗಳಿಗೆ ಅರ್ಜಿ ಆಹ್ವಾನಿಸಲಾಗಿದೆ ಎಂದು ಸಂಘದ ಪ್ರಧಾನ ಕಾರ್ಯದರ್ಶಿ ಉಜ್ವಲ್ ರಂಜಿತ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.


ಸಂಘದಿಂದ ಐದು ಪ್ರಶಸ್ತಿಗಳನ್ನು ಸ್ಥಾಪಿಸಲಾಗಿದ್ದು ಮುದ್ರಣ ಮಾಧ್ಯಮಕ್ಕೆ ಅತ್ಯುತ್ತಮ ಕ್ರೀಡೆ, ರಾಜಕೀಯ, ಕೃಷಿ ಹಾಗೂ ಗ್ರಾಮೀಣ ವರದಿಗಳಿಗೆ ಪ್ರಶಸ್ತಿಗಳನ್ನು ನೀಡಲಾಗುತ್ತದೆ. ಇದರೊಂದಿಗೆ ಸಂಘದ ಹಿರಿಯ ಸಲಹೆಗಾರರಾದ ಬಿ.ಜಿ.ಅನಂತಶಯನರವರು ತಮ್ಮ ತಾಯಿ ರಾಜಲಕ್ಷ್ಮಿ ಗೋಪಾಲಕೃಷ್ಣ ಅವರ ಹೆಸರಿನಲ್ಲಿ ಸ್ಥಾಪಿಸಿರುವ ಅತ್ಯುತ್ತಮ ಮಾನವೀಯ ವರದಿ ಪ್ರಶಸ್ತಿಗೆ ಅರ್ಜಿ ಸಲ್ಲಿಸಬಹುದಾಗಿದೆ.


ದೃಶ್ಯ ಮಾಧ್ಯಮಕ್ಕೆ ಅತ್ಯುತ್ತಮ ಮಾನವೀಯ ವರದಿ ಮತ್ತು ಕೊಡಗಿನ ಜ್ವಲಂತ ಸಮಸ್ಯೆಗಳ ಕುರಿತಾದ ವರದಿಗಳಿಗೆ ಪ್ರಶಸ್ತಿ ನೀಡಲಾಗುತ್ತದೆ. ಕೊಡಗು ಪತ್ರಕರ್ತರ ಸಂಘದ ಸದಸ್ಯರುಗಳಿಗೆ ಮಾತ್ರ ಪ್ರಶಸ್ತಿಗಳಿಗೆ ಅರ್ಜಿ ಸಲ್ಲಿಸಲು ಅವಕಾಶವಿದ್ದು, ವರದಿಗಳು ೨೦೨೨ ರ ಜನವರಿಯಿಂದ ೨೦೨೨ರ ಡಿಸೆಂಬರ್ ಅಂತ್ಯದೊಳಗೆ ಪ್ರಕಟವಾಗಿರಬೇಕು. ವರದಿಯಲ್ಲಿ ವರದಿಗಾರನ ಹೆಸರು ಇಲ್ಲದಿದ್ದರೆ ಸಂಪಾದಕರು ಅಥವಾ ಜಿಲ್ಲಾ ವರದಿಗಾರರ ದಢೀಕರಣವಿರಬೇಕು ಎಂದು ತಿಳಿಸಿದ್ದಾರೆ.


ಒಬ್ಬರು ಒಂದು ಪ್ರಶಸ್ತಿಗೆ ತಮ್ಮ ಒಂದು ವರದಿಯನ್ನು ಮಾತ್ರ ಸಲ್ಲಿಸಬೇಕಾಗಿದೆ. ಟಿವಿ ಮಾಧ್ಯಮದವರು ಕೂಡ ಒಂದು ಪ್ರಶಸ್ತಿಗೆ ಒಂದು ವರದಿಯನ್ನು ಮಾತ್ರ ಕಳುಹಿಸಬಹುದಾಗಿದೆ. ಪ್ರಶಸ್ತಿಗೆ ಅರ್ಜಿ ಸಲ್ಲಿಸುವವರು ವರದಿಯ ಮೂರು ಜೆರಾಕ್ಸ್ ಪ್ರತಿಗಳು ಮತ್ತು ಮಾಧ್ಯಮದವರು ಪೆನ್ ಡ್ರೈವ್ ಅಥವಾ ಡಿವಿಡಿಯನ್ನು ಜೂ೧೦ ರೊಳಗಾಗಿ ಸಂಘಕ್ಕೆ ಸಲ್ಲಿಸಬಹುದು. ಹೆಚ್ಚಿನ ಮಾಹಿತಿಗೆ ೯೯೪೫೪೧೧೮೨೧ ಸಂಪರ್ಕಿಸಬಹುದು ಎಂದು ಉಜ್ವಲ್ ರಂಜಿತ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net