ಮಗ ಎಸ್ಸೆಸ್ಸೆಲ್ಸಿ ಪರೀಕ್ಷೆಯಲ್ಲಿ ಫೇಲಾದ ದುಃಖದಲ್ಲೇ ಆತ್ಮಹತ್ಯೆಗೆ ಶರಣಾದ ತಂದೆ

Suicide
Published on

ಕೊಡಗು: ಮಗ ಎಸ್ಸೆಸ್ಸೆಲ್ಸಿ ಪರೀಕ್ಷೆಯಲ್ಲಿ ಫೇಲಾದ ಎಂಬ ಬೇಸರದಿಂದ ತಂದೆಯೊಬ್ಬ ನೇಣಿಗೆ ಶರಣಾಗಿರುವ ಘಟನೆ ಸೋಮವಾರಪೇಟೆ ತಾಲೂಕಿನ ಚೆಟ್ಟಳ್ಳಿ ಗ್ರಾಮದಲ್ಲಿ ನಡೆದಿದೆ.

ಕೂಲಿ ಕಾರ್ಮಿಕ ರಘು(39) ಆತ್ಮಹತ್ಯೆ. ತನ್ನ ಪತ್ನಿಯ ವೇಲ್ ಬಳಸಿ ಆತ್ಮಹತ್ಯೆಗೆ ಶರಣಾಗಿದ್ದಾನೆ. ಎಸ್ಸೆಸ್ಸೆಲ್ಸಿ ಪರೀಕ್ಷೆಯ ನಾಲ್ಕು ವಿಷಯದಲ್ಲಿ ಮಗ ಪ್ರಶಾಂತ್​ ಅನುತೀರ್ಣನಾಗಿದ್ದ. ಮಗ ಫೇಲ್ ಆಗಿದ್ದಕ್ಕೆ ತಂದೆ ಕುಡಿತದ ದಾಸನಾಗಿದ್ದ ಎಂದು ಆತನ ಪತ್ನಿ ಮಂಜುಳಾ ಹೇಳಿದ್ದಾರೆ.

ಪತ್ನಿ ಕೆಲಸಕ್ಕೆ ಹೋಗಿದ್ದ ವೇಳೆ ಆತ್ಮಹತ್ಯೆ ಶರಣಾಗಿದ್ದಾನೆ. ಸೋಮವಾರ ಈ ಘಟನೆ ನಡೆದಿದೆ. ಘಟನಾ ಸ್ಥಳಕ್ಕೆ ಸಿದ್ದಾಪುರ ಠಾಣಾ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿ, ಪ್ರಕರಣ ದಾಖಲಿಸಿಕೊಂಡಿದ್ದಾರೆ. (ದಿಗ್ವಿಜಯ ನ್ಯೂಸ್​)

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net