ಮಾನಸಿಕ ಅಸ್ವಸ್ಥನ ಸಾವು: 8 ಪೊಲೀಸ್​ ಸಿಬ್ಬಂದಿ ಅಮಾನತು..!

Kodagu Police
Published on

ಕೊಡಗು: ವೀರಾಜಪೇಟೆಯಲ್ಲಿ ಮಾನಸಿಕ ಅಸ್ವಸ್ಥನೊಬ್ಬ ಮೃತಪಟ್ಟ ಘಟನೆಗೆ ಸಂಬಂಧಿಸಿದಂತೆ ಎಂಟು ಪೊಲೀಸ್ ಸಿಬ್ಬಂದಿಯನ್ನು ಅಮಾನತು ಮಾಡಲಾಗಿದೆ.

ಪೊಲೀಸರು ನಡೆಸಿದ ಹಲ್ಲೆಯಿಂದ ವೀರಾಜಪೇಟೆಯ ಚಿಕ್ಕಪೇಟೆ ನಿವಾಸಿಯಾದ ರಾಯ್ ಡಿಸೋಜ ಮೃತಪಟ್ಟಿದ್ದಾರೆ ಎಂದು ಆರೋಪಿಸಲಾಗಿತ್ತು. ಘಟನೆ ತಿಳಿದು ದಕ್ಷಿಣ ವಲಯ ಐಜಿ ಪ್ರವೀಣ್ ಮದುಕರ್ ಪವಾರ್ ವೀರಾಜಪೇಟೆಗೆ ಭೇಟಿ ನೀಡಿ ಸ್ಥಳ ಪರಿಶೀಲನೆ ನಡೆಸಿದ್ದಾರೆ. ಮೇಲ್ನೋಟಕ್ಕೆ ಆರೋಪ‌ ಸಾಬೀತಾದ ಹಿನ್ನಲೆಯಲ್ಲಿ ಇಬ್ಬರು ಹೆಡ್ ಕಾನ್ಸ್‌ಟೇಬಲ್ ಸೇರಿದಂತೆ ಎಂಟು‌ ಪೊಲೀಸರ ಮೇಲೆ ಎಫ್​ಐಆರ್ ದಾಖಲು ಮಾಡಿ ಅಮಾನತು ಮಾಡಿ ಆದೇಶ ಹೊರಡಿಸಿದ್ದಾರೆ.

ಇನ್ನೂ ಪ್ರಕರಣವನ್ನು ಸಿಐಡಿಗೆ ವಹಿಸಲಾಗುವುದೆಂದು ಮಾಹಿತಿ ನೀಡಿದ್ದಾರೆ. ಜೂನ್ 9 ರಂದು ರಾತ್ರಿ ವೀರಾಜಪೇಟೆ ಠಾಣೆಯಲ್ಲಿ ಈ ಹಲ್ಲೆ ಪ್ರಕರಣ ನಡೆದಿತ್ತು. ಮಾರಣಾಂತಿಕ ಹಲ್ಲೆಯಿಂದ ಕೋಮಾಕ್ಕೆ ಜಾರಿದ ರಾಯ್ ಡಿಸೋಜನನ್ನು‌ ಮಡಿಕೇರಿ ಜಿಲ್ಲಾಸ್ಪತ್ರೆಗೆ ಸೇರಿಸಲಾಗಿತ್ತು. ಚಿಕಿತ್ಸೆ ಫಲಕಾರಿಯಾಗದೆ ಇಂದು ಬೆಳಗ್ಗೆ ರಾಯ್ ಡಿಸೋಜ ಮೃತಪಟ್ಟಿದ್ದಾರೆ. (ದಿಗ್ವಿಜಯ ನ್ಯೂಸ್​)

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net