ಶನಿವಾರ ಜಿಲ್ಲಾಮಟ್ಟದ ಚಿತ್ರಕಲಾ ಸ್ಪರ್ಧೆ

Published on

ವಿಜಯವಾಣಿ ಸುದ್ದಿಜಾಲ ಮಡಿಕೇರಿ

ಕೊಡಗು ಪ್ರೆಸ್ ಕ್ಲಬ್ ಬೆಳ್ಳಿ ಮಹೋತ್ಸವ ಪ್ರಯುಕ್ತ ಜ.೭ ರಂದು ಗೋಣಿಕೊಪ್ಪ ಕಾಲ್ಸ್ ವಿದ್ಯಾಸಂಸ್ಥೆ ಸಭಾಂಗಣದಲ್ಲಿ ಜಿಲ್ಲಾಮಟ್ಟದ ಚಿತ್ರಕಲಾ ಸ್ಪರ್ಧೆ ಆಯೋಜಿಸಲಾಗಿದೆ.

ಅಂದು ಬೆಳಗ್ಗೆ ೯ ಗಂಟೆಗೆ ಪೊನ್ನಂಪೇಟೆ ತಾಲೂಕು ಕಾರ್ಯನಿರತ ಪತ್ರಕರ್ತರ ಸಂಘ ಹಾಗೂ ಗೋಣಿಕೊಪ್ಪ ಕಾಲ್ಸ್ ಸಹಯೋಗದಲ್ಲಿ ನಡೆಯಲಿರುವ ಕಾರ್ಯಕ್ರಮದ ಅಧ್ಯಕ್ಷತೆಯನ್ನು ಕೊಡಗು ಪ್ರೆಸ್ ಕ್ಲಬ್ ಬೆಳ್ಳಿ ಮಹೋತ್ಸವ ಆಚರಣಾ ಸಮಿತಿ ಅಧ್ಯಕ್ಷ ಡಾ. ಉಳ್ಳಿಯಡ ಎಂ. ಪೂವಯ್ಯ ವಹಿಸಲಿದ್ದಾರೆಂದು ಆಚರಣಾ ಸಮಿತಿ ಪ್ರಧಾನ ಕಾರ್ಯದರ್ಶಿ ಕೆ.ಕೆ. ರೆಜಿತ್‌ಕುಮಾರ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಸರ್ಕಾರಿ ಜಮೀನು ಸಂರಕ್ಷಣಾ ಸಮಿತಿ ಅಧ್ಯಕ್ಷ ಕೆ.ಜಿ. ಬೋಪಯ್ಯ ಬೆಳ್ಳಿ ಮಹೋತ್ಸವ ಉದ್ಘಾಟಿಸಲಿದ್ದಾರೆ. ಅಂತಾರಾಷ್ಟ್ರೀಯ ಅಥ್ಲೆಟ್ ತೀತಮಾಡ ಅರ್ಜುನ್ ದೇವಯ್ಯ ಲಾಂಛನ ಅನಾವರಣ ಮಾಡಲಿದ್ದಾರೆ. ಕೊಡಗು ಪ್ರೆಸ್ ಕ್ಲಬ್ ಬೆಳ್ಳಿ ಮಹೋತ್ಸವ ಆಚರಣಾ ಸಮಿತಿ ಮಹಾಪೋಷಕ ಜಿ. ರಾಜೇಂದ್ರ ಚಿತ್ರಕಲಾ ಸ್ಪರ್ಧೆ ಉದ್ಘಾಟಿಸುತ್ತಾರೆ.

ಮುಖ್ಯಅತಿಥಿಗಳಾಗಿ ಕೊಡಗು ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘ ಅಧ್ಯಕ್ಷೆ ಬಿ.ಆರ್. ಸವಿತಾ ರೈ, ಕಾಲ್ಸ್ ವಿದ್ಯಾಸಂಸ್ಥೆ ಪ್ರಾಂಶುಪಾಲರಾದ ಬಾಚೇಟೀರ ಗೌರಮ್ಮ ನಂಜಪ್ಪ, ಪೊನ್ನಂಪೇಟೆ ತಾಲೂಕು ಕಾರ್ಯನಿರತ ಪತ್ರಕರ್ತರ ಸಂಘ ಅಧ್ಯಕ್ಷ ಸಣ್ಣುವಂಡ ಕಿಶೋರ್ ನಾಚಪ್ಪ ಮುಖ್ಯ ಅತಿಥಿಯಾಗಿ ಭಾಗವಹಿಸುತ್ತಾರೆ.

ಬಹುಮಾನ ವಿತರಣೆ: ಬೆಳ್ಳಿ ಮಹೋತ್ಸವ ಸಾಂಸ್ಕೃತಿಕ ಸಮಿತಿ ಅಧ್ಯಕ್ಷ ಐಮಂಡ ಗೋಪಾಲ್ ಸೋಮಯ್ಯ ಅಧ್ಯಕ್ಷತೆಯಲ್ಲಿ ಮಧ್ಯಾಹ್ನ ೨ ಗಂಟೆಗೆ ಬಹುಮಾನ ವಿತರಣೆ ಮಾಡಲಾಗುತ್ತದೆ. ಮುಖ್ಯಅತಿಥಿಗಳಾಗಿ ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ನಿರ್ದೇಶಕ ಟಿ.ಎನ್. ಮಂಜುನಾಥ್, ಕೊಡಗು ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಪ್ರಧಾನ ಕಾರ್ಯದರ್ಶಿ ಬಾಚರಣಿಯಂಡ ಅನು ಕಾರ್ಯಪ್ಪ, ಪೊನ್ನಂಪೇಟೆ ತಾಲೂಕು ಕಾರ್ಯನಿರತ ಪತ್ರಕರ್ತರ ಸಂಘ ಪ್ರಧಾನ ಕಾರ್ಯದರ್ಶಿ, ಎನ್.ಎನ್. ದಿನೇಶ್ ಭಾಗವಹಿಸ ಲಿದ್ದಾರೆ.

ಪೊನ್ನಂಪೇಟೆ ತಹಸೀಲ್ದಾರ್ ಎನ್.ಎಸ್. ಪ್ರಶಾಂತ್, ಕೊಡಗು ಜಿಲ್ಲಾ ಪಂಚಾಯಿತಿ ಮಾಜಿ ಸದಸ್ಯ ಅಚ್ಚಪಂಡ ಮಹೇಶ್ ಗಣಪತಿ, ವಿರಾಜಪೇಟೆ ಲಿಟ್ಲ್ ಸ್ಕಾಲರ್ ಅಕಾಡೆಮಿ ಅಧ್ಯಕ್ಷೆ ಪೂಜಾ ರವೀಂದ್ರ, ವಿರಾಜಪೇಟೆ ಕೂರ್ಗ್ ಅವೆನ್ಯೂ ಸೂಪರ್ ಮಾರ್ಕೇಟ್ ಪಾಲುದಾರ ಹನೀಫ್, ವಿರಾಜಪೇಟೆ ನಗರ ಯುವ ಕಾಂಗ್ರೆಸ್ ಅಧ್ಯಕ್ಷ ಸೈಯದ್ ಶಬೀರ್ ಬಹುಮಾನ ವಿತರಿಸಲಿದ್ದಾರೆ. ಅಂತಾರಾಷ್ಟ್ರೀಯ ರಗ್ಬಿ ಆಟಗಾರ ಮಾದಂಡ ತಿಮ್ಮಯ್ಯ ಸ್ಪರ್ಧಿಗಳಿಗೆ ಪ್ರಮಾಣ ಪತ್ರ ವಿತರಿಸಲಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net