ಗಾಂಜಾ ಮಾರಲು ಯತ್ನಿಸಿದ ಇಬ್ಬರ ಬಂಧನ

27 vtp1 ganja
Published on

ವಿರಾಜಪೇಟೆ: ಪಟ್ಟಣದಲ್ಲಿ ಗಾಂಜಾ ಮಾರಾಟಕ್ಕೆ ಯತ್ನಿಸುತ್ತಿದ್ದ ಇಬ್ಬರನ್ನು ಬಂಧಿಸಿರುವ ಪೊಲೀಸರು, ಗಾಂಜಾ ಹಾಗೂ ಕೃತ್ಯಕ್ಕೆ ಬಳಸಿದ ಆಟೋ ರಿಕ್ಷಾವನ್ನು ವಶಪಡಿಸಿಕೊಂಡಿದ್ದಾರೆ.
ಮೈಸೂರು ಕಲ್ಯಾಣಗಿರಿಯ ಡಿ.ಐ.ಮೊಹಮ್ಮದ್, ಪಿರಿಯಾಪಟ್ಟಣದ ಜಬಿವುಲ್ಲಾ ಖಾನ್ ಬಂಧಿತರು.
ಶನಿವಾರ ಬೆಳಗ್ಗೆ ಗೋಣಿಕೊಪ್ಪದಿಂದ ವಿರಾಜಪೇಟೆಗೆ ಗಾಂಜಾ ಮಾರಾಟ ಮಾಡಲು ಬರುತ್ತಿದ್ದ ಸಂದರ್ಭ ವಿರಾಜಪೇಟೆಯ ಕಾವೇರಿ ಕಾಲೇಜು ಬಳಿ ಖಚಿತ ಮಾಹಿತಿ ಮೇರೆಗೆ ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ. ಬಂಧಿತರಿಂದ 41 ಸಾವಿರ ರೂ. ಮೌಲ್ಯದ 1,182 ಗ್ರಾಂ ಗಾಂಜಾ ಹಾಗೂ ಕೃತ್ಯಕ್ಕೆ ಬಳಸಿದ ಆಟೋ ರಿಕ್ಷಾವನ್ನು ವಶಪಡಿಸಿಕೊಂಡಿದ್ದಾರೆ.
ಡಿವೈಎಸ್‌ಪಿ ಮಾರ್ಗದರ್ಶನದಲ್ಲಿ ನಡೆದ ಕಾರ್ಯಚರಣೆಯಲ್ಲಿ ವಿರಾಜಪೇಟೆ ವೃತ್ತನಿರೀಕ್ಷಕ ಕ್ಯಾತೆಗೌಡ, ಪಿಎಸ್‌ಐ ಎಚ್.ಎಸ್. ಬೋಜಪ್ಪ ಹಾಗೂ ಸಿಬ್ಬಂದಿ ಇದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net