ಪ್ರತಿಯೊಬ್ಬ ವಿದ್ಯಾರ್ಥಿಗೂ ಕೌಶಲ್ಯಾಧಾರಿತ ಶಿಕ್ಷಣ

kodagu vv
Published on

ಕುಶಾಲನಗರ:

ಕೊಡಗು ವಿಶ್ವವಿದ್ಯಾಲಯದಲ್ಲಿ ವ್ಯಾಸಂಗ ಮಾಡುತ್ತಿರುವ ಪ್ರತಿಯೊಬ್ಬ ವಿದ್ಯಾರ್ಥಿಯೂ ಕೌಶಲ್ಯಾಧಾರಿತ ಶಿಕ್ಷಣ ಸಾಮರ್ಥ್ಯ ಹೊಂದಿರುವAತೆ ರೂಪಿಸುವ ಮಹತ್ವಾಕಾಂಕ್ಷೆಯನ್ನು ಹೊಂದಲಾಗಿದೆ ಎಂದು ಕೊಡಗು ವಿಶ್ವವಿದ್ಯಾಲಯ ಕುಲಪತಿ ಪ್ರೊ. ಅಶೋಕ ಸಂಗಪ್ಪ ಆಲೂರ ಹೇಳಿದರು. ಕೊಡಗು ವಿಶ್ವವಿದ್ಯಾಲಯದ ಮುಖ್ಯ ಕೇಂದ್ರ, ಘಟಕ ಮಹಾವಿದ್ಯಾಲಯ ಹಾಗೂ ಸಂಯೋಜಿತ ಮಹಾವಿದ್ಯಾಲಯದ ಸ್ನಾತಕೋತ್ತರ ವಿದ್ಯಾರ್ಥಿಗಳಿಗಾಗಿ ಶುಕ್ರವಾರ ಹಮ್ಮಿಕೊಂಡಿದ್ದ ವೃತ್ತಿ ಮಾರ್ಗದರ್ಶನ ಮತ್ತು ವ್ಯಕ್ತಿತ್ವ ಅಭಿವೃದ್ಧಿ ಒಂದು ದಿನದ ವಿಶೇಷ ಕಾರ್ಯಗಾರ ಉದ್ಘಾಟಿಸಿ ಮಾತನಾಡಿದರು.

ಕೊಡಗು ಜಿಲ್ಲೆಯಲ್ಲಿರುವ ಶೋಷಿತ ಸಮುದಾಯಗಳ, ಬುಡಕಟ್ಟು ಜನಾಂಗದ, ಹಿಂದುಳಿದ ಮತ್ತು ಅಲ್ಪಸಂಖ್ಯಾತ ಸಮುದಾಯಗಳ ಹಾಗೂ ಆರ್ಥಿಕವಾಗಿ ಹಿಂದುಳಿದಿರುವ ಕುಟುಂಬದ ಹಿನ್ನೆಲೆಯಿಂದ ಬಂದAತಹ ವಿದ್ಯಾರ್ಥಿಗಳ ಉಜ್ವಲವಾದ ಭವಿಷ್ಯಕ್ಕಾಗಿ ಕೊಡಗು ವಿಶ್ವವಿದ್ಯಾಲಯವು ಆಯೋಜಿಸಿರುವ ಈ ವಿಶೇಷ ಕಾರ್ಯಗಾರದ ಮೂಲಕ ಕೊಡಗು ವಿಶ್ವವಿದ್ಯಾಲಯದ ಅಧೀನದಲ್ಲಿ ವ್ಯಾಸಂಗ ಮಾಡುತ್ತಿರುವ ಪ್ರತಿಯೊಬ್ಬರಿಗೂ ಉದ್ಯೋಗಾವಕಾಶಗಳನ್ನು ಒದಗಿಸಿಕೊಡುವುದು, ಮೂಲ ಕೋರ್ಸ್ಗಳ ಜೊತೆಗೆ ಹೆಚ್ಚುವರಿ ಸರ್ಟಿಫಿಕೇಟ್ ಕೋರ್ಸ್ಗಳನ್ನು ವಿವಿಧ ಪ್ರತಿಷ್ಠಿತ ಸಂಸ್ಥೆಗಳ ಒಡಂಬಡಿಕೆಯೊAದಿಗೆ ಉಚಿತವಾಗಿ ದೊರಕಿಸಿಕೊಡುವ ಉದ್ದೇಶ ಹೊಂದಿದೆ. ಕ್ಯಾಂಪಸ್ ಸೆಲೆಕ್ಷನ್ ಆಯೋಜಿಸಿ ಅವರಿಗೆಲ್ಲಾ ಪ್ರತಿಷ್ಠಿತ ಸಂಸ್ಥೆಗಳಲ್ಲಿ ಉದ್ಯೋಗವಾಕಶವನ್ನು ಕಲ್ಪಿಸಿಕೊಡುವ ದೂರದೃಷ್ಠಿಯನ್ನೊಳಗೊಂಡಿದೆ. ಯಾವುದೇ ಕ್ಷೇತ್ರದಲ್ಲಿ ಉದ್ಯೋಗ ಪಡೆಯುವ ನಿಟ್ಟಿನಲ್ಲಿ ಸಂದರ್ಶನದ ತಯಾರಿಯ ಕೌಶಲ್ಯ, ಜ್ಞಾನ ಮತ್ತು ಆ ಹುದ್ದೆಗೆ ಸೂಕ್ತ ಮತ್ತು ನಿರ್ಣಾಯಕ ಪಾತ್ರ ವಹಿಸುವ ಅಂಶಗಳನ್ನು ಮತ್ತು ಸಂದರ್ಶನದ ತಯಾರಿಯ ಪ್ರಯೋಜನವನ್ನು ನೀಡುವ ವಿಧಾನಗಳನ್ನು ಈ ಕಾರ್ಯಗಾರ ಹೊಂದಿದೆ ಎಂದು ಹೇಳಿದರು.

ಕೊಡಗು ವಿಶ್ವವಿದ್ಯಾಲಯ ಕುಲಸಚಿವರು (ಮೌಲ್ಯಮಾಪನ) ಡಾ. ಎಂ. ಸುರೇಶ, ವಿಶೇಷ ಸಂಪನ್ಮೂಲ ವ್ಯಕ್ತಿಗಳಾಗಿ ಆಗಮಿಸಿದ್ದ ಸಹಕಾರ ಸಂಘಗಳ ನಿವೃತ್ತ ಜಂಟಿ ರಿಜಿಸ್ಟ್ರಾರ್ ಎಸ್.ಎಚ್. ಸಂತೋಷ್ ಕುಮಾರ್, ಮತ್ತೋರ್ವ ಸಂಪನ್ಮೂಲ ವ್ಯಕ್ತಿ ಒ.ಎ.ಎಂ. ಬುಷ್‌ಸ್ಪ್ರಿಂಗ್ ಎಂಟರ್‌ಪ್ರೈಸಸ್ ಲಿಮಿಟೆಡ್ ಬೆಂಗಳೂರು, ಇಲ್ಲಿನ ಜನರಲ್ ಮ್ಯಾನೇಜರ್ ಬಿ.ಪಿ. ವೆಂಕಟೇಶಮೂರ್ತಿ ಇದ್ದರು.

ಈ ವಿಶೇಷ ಕಾರ್ಯಾಗಾರದಲ್ಲಿ ಕೊಡಗು ವಿಶ್ವವಿದ್ಯಾಲಯದ ಜ್ಞಾನ ಕಾವೇರಿ ಮುಖ್ಯ ಆವರಣ, ಮಡಿಕೇರಿಯ ಫೀಲ್ಡ್ ಮಾರ್ಷಲ್ ಕೆ.ಎಂ.ಕಾರ್ಯಪ್ಪ ಮಹಾವಿದ್ಯಾಲಯ, ಗೋಣಿಕೊಪ್ಪದ ಕಾವೇರಿ ಮಹಾವಿದ್ಯಾಲಯ ಹಾಗೂ ವಿರಾಜಪೇಟೆಯ ಸೆಂಟ್ ಆನ್ಸ್ ಮಹಾವಿದ್ಯಾಲಯದ ಸ್ನಾತಕೋತ್ತರ ಪದವಿ ವಿದ್ಯಾರ್ಥಿಗಳು ಮತ್ತು ಬೋಧಕ ವೃಂದದವರು ಭಾಗವಹಿಸಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net