

ವಿಜಯವಾಣಿ ಸುದ್ದಿಜಾಲ ಮಡಿಕೇರಿ
ಕೊಡಗು ಜಿಲ್ಲಾ ಪಂಚಾಯಿತಿ ನೂತನ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಯಾಗಿ ಡಾ.ಎಸ್.ಆಕಾಶ್ ಗುರುವಾರ ಅಧಿಕಾರ ಸ್ವೀಕಾರಿಸಿದರು.
ಕರ್ನಾಟಕ ಲೋಕಸೇವಾ ಆಯೋಗಕ್ಕೆ ವರ್ಗಾವಣೆ ಆಗಿರುವ ಭನ್ವರ್ ಸಿಂಗ್ ಮೀನಾ ಹೂಗುಚ್ಛ ನೀಡುವ ಮೂಲಕ ನೂತನ ಸಿಇಒ ಅವರಿಗೆ ಅಧಿಕಾರ ಹಸ್ತಾಂತರಿಸಿದರು. ಡಾ.ಎಸ್. ಆಕಾಶ್ ೨೦೧೯ ನೇ ಬ್ಯಾಚ್ ಐಎಎಸ್. ಅಧಿಕಾರಿಯಾಗಿದ್ದು, ಈ ಹಿಂದೆ ಬಳ್ಳಾರಿ ಉಪವಿಭಾಗಾಧಿಕಾರಿಯಾಗಿ ಕರ್ತವ್ಯ ನಿರ್ವಹಿಸಿದ್ದಾರೆ.
ಮೂಲತಃ ಮೈಸೂರು ಜಿಲ್ಲೆಯವರಾಗಿದ್ದು, ವೈದ್ಯಕೀಯ ಶಿಕ್ಷಣ ಪದವೀಧರ ರಾಗಿದ್ದಾರೆ.