ಸಮ್ಮೇಳನಾಧ್ಯಕ್ಷರ ಮೆರವಣಿಗೆಯಲ್ಲಿ ಮಂಗಳವಾದ್ಯ, ಚೆಂಡೆವಾದ್ಯ, ಕಳಸ ಹೊತ್ತ ಮಹಿಳೆಯರು, ಸ್ಥಬ್ಧಚಿತ್ರಗಳು, ಗೊಂಬೆಗಳು, ಪೂಜಾ ಕುಣಿತ, ಡೊಳ್ಳು ಕುಣಿತ, ವೀರಗಾಸೆ, ಕೊಡಗಿನ ವಾಲಗ, ಬ್ಯಾಂಡ್ ಸೆಟ್, ಶಾಲಾ ಕಾಲೇಜು ವಿದ್ಯಾರ್ಥಿಗಳು, ಸಂಜೀವಿನಿ ಮಹಿಳಾ ಒಕ್ಕೂಟ, ಧರ್ಮಸ್ಥಳ ಗ್ರಾಮೀಣಾಭಿವೃದ್ಧಿ ಸಂಘ, ಅಂಗನವಾಡಿ ಸಂಘಟನೆ, ಸ್ತ್ರೀಶಕ್ತಿ ಒಕ್ಕೂಟ, ಆಶಾ ಕಾರ್ಯಕರ್ತೆಯರು, ಶಿಕ್ಷಕರುಗಳು, ಸಂಘ ಸಂಸ್ಥೆಗಳ ಮತ್ತು ಸಮಾಜಗಳ ಪ್ರತಿನಿಧಿಗಳು, ಆಟೋ ಮತ್ತು ವಾಹನ ಚಾಲಕರ ಸಂಘದವರು, ಎನ್‌ಸಿಸಿ ತಂಡ, ಸ್ಕೌಟ್ಸ್ ಮತ್ತು ಗೈಡ್ಸ್ ಮೆರವಣಿಗೆಯಲ್ಲಿ ಗಮನ ಸೆಳೆದರು. ರಸ್ತೆ ಯುದ್ದಕ್ಕೂ ೧೧ ದ್ವಾರಗಳು ಗಮನ ಸೆಳೆದವು.