ಕೊಡ್ಲಿಪೇಟೆ ಕಿರಿಕೊಡ್ಲಿ ಮಠಾಧೀಶರಾದ ಶ್ರೀ ಸದಾಶಿವ ಸ್ವಾಮೀಜಿ ಸಾನ್ನಿಧ್ಯದಲ್ಲಿ ನಡೆಯಲಿರುವ ಕಾರ್ಯಕ್ರಮದಲ್ಲಿ ಕೊಡಗು- ಮೈಸೂರು ಲೋಕಸಭಾ ಸದಸ್ಯ ಯದುವೀರ್ ಕೃಷ್ಣದತ್ತ ಒಡೆಯರ್, ಮಡಿಕೇರಿ ಕ್ಷೇತ್ರದ ಶಾಸಕ ಡಾ. ಮಂತರ್ ಗೌಡ, ಮಾಜಿ ಶಾಸಕ ಎಂ.ಪಿ.ಅಪ್ಪಚ್ಚು ರಂಜನ್ ಮತ್ತಿತರರು ಭಾಗವಹಿಸಲಿದ್ದಾರೆ. ಸಾರ್ವಜನಿಕರು ಈ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಯಶಸ್ವಿಗೊಳಿಸುವಂತೆ ಕಾವೇರಿ ಮಹಾ ಆರತಿ ಬಳಗದ ಸಂಚಾಲಕಿ ವನಿತಾ ಚಂದ್ರಮೋಹನ್ ಪ್ರಕಟಣೆಯಲ್ಲಿ ಮನವಿ ಮಾಡಿದ್ದಾರೆ.