ಗ್ರಾಮೀಣ ಮಕ್ಕಳಿಗೆ ನಗರದ ಮಕ್ಕಳಿಗೆ ಸರಿಸಮನಾದ ವೇದಿಕೆ ಕಲ್ಪಿಸಿಕೊಡುವುದು ನನ್ನ ಆದ್ಯತೆ. ಮುಖ್ಯಮಂತ್ರಿಗಳ ವಿಶೇಷ ಕಾಳಜಿಯಿಂದ ಈ ಅನುದಾನ ದೊರೆತಿದೆ. ಶೀಘ್ರದಲ್ಲೇ ಕಾಮಗಾರಿ ಆರಂಭಿಸಿ, ಗುಣಮಟ್ಟದಿಂದ ಪೂರ್ಣಗೊಳಿಸಲಾಗುವುದು. ಇದಕ್ಕೆ ಶಾಲೆಯ ಎಸ್‌ಡಿಎಂಸಿ ಹಾಗೂ ಶಿಕ್ಷಕರ ಸಹಕಾರ ಅಗತ್ಯ. ಈ ಯೋಜನೆ ಅಡಿಯಲ್ಲಿ ಹೆಬ್ಬಾಲೆ ಸರ್ಕಾರಿ ಪ್ರೌಢಶಾಲೆ ಆವರಣದಲ್ಲಿ ಆಧುನಿಕ ಸೌಲಭ್ಯಗಳೊಂದಿಗೆ ತೆರೆದ ಗ್ಯಾಲರಿ ಹಾಗೂ ಮಿನಿ ರಂಗಮಂದಿರ ನಿರ್ಮಾಣವಾಗಲಿದೆ. ಇದರಿಂದ ಶಾಲಾ ವಾರ್ಷಿಕೋತ್ಸವ, ಸಾಂಸ್ಕೃತಿಕ ಕಾರ್ಯಕ್ರಮ, ವಿಚಾರ ಸಂಕಿರಣ, ಕ್ರೀಡಾ ಚಟುವಟಿಕೆಗಳಿಗೆ ವೇದಿಕೆ ಲಭ್ಯವಾಗಲಿದೆ ಎಂದರು.