ಕೊಡಗು ಜಿಲ್ಲಾ ವ್ಯಾಪ್ತಿಯಲ್ಲಿ ನಿಷೇಧಿತ ಮಾದಕ ವಸ್ತುಗಳ ಮಾರಾಟ, ಸರಬರಾಜು ಹಾಗೂ ಬಳಕೆಯನ್ನು ತಡೆಗಟ್ಟುವ ಹಿನ್ನೆಲೆಯಲ್ಲಿ ಪೊಲೀಸರು ಕಾರ್ಯಾಚರಣೆ ಮುಂದುವರಿಸಿದ್ದು, ಜಿಲ್ಲೆಯಲ್ಲಿ ಜನವರಿ ತಿಂಗಳಲ್ಲಿ ಒಟ್ಟು 63 ಪ್ರಕರಣಗಳನ್ನು ಪತ್ತೆಹಚ್ಚಲಾಗಿದೆ. ಇದರಲ್ಲಿ ಮಾದಕ ವಸ್ತು ಸಾಗಾಣಿಕೆಯ 9 ಪ್ರಕರಣಗಳು ಸೇರಿದ್ದು ಮಾದಕ ವಸ್ತು ಸೇವನೆಯ 54 ಪ್ರಕರಣಗಳು ಒಳಗೊಂಡಿವೆ. ಈ ಎಲ್ಲಾ ಪ್ರಕರಣಗಳಲ್ಲಿ ಒಟ್ಟು 2.692 ಕೆಜಿ ಗಾಂಜಾ ವಶಪಡಿಸಿಕೊಳ್ಳಲಾಗಿದೆ ಎಂದು ಎಸ್‌ಪಿ ಆರ್.ಎನ್. ಬಿಂದುಮಣಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.