ಕೊಡವಲ್ಯಾಂಡ್ ಭೂ ರಾಜಕೀಯ ಸ್ವಯಂ ಆಡಳಿತ, ಕೊಡವರಿಗೆ ವಿಶ್ವರಾಷ್ಟ್ರ ಸಂಸ್ಥೆಯ ಇಂಡಿಜಿನಸ್ ಪೀಪಲ್ಸ್ ರೈಟ್ಸ್, ಎಸ್.ಟಿ.ಪಟ್ಟಿಯಲ್ಲಿ ವರ್ಗೀಕರಣ, ಸಿಕ್ಕಿಂನ ಸಂಘ ಮತಕ್ಷೇತ್ರದಂತೆ ಸಂಸತ್ ಮತ್ತು ವಿಧಾನಸಭೆಯಲ್ಲಿ ವಿಶೇಷ ಪ್ರಾತಿನಿಧ್ಯ ನೀಡಬೇಕು. ಕೊಡವರ ಪೂರ್ವಾರ್ಜಿತ ಭೂ ಹಕ್ಕು ಮತ್ತು ಧಾರ್ಮಿಕ ಸಂಸ್ಕಾರ ತೋಕ್ ಹಕ್ಕು ಚಿರಸ್ಥಾಯಿಯಾಗಿ ಮುಂದುವರೆಯಬೇಕು ಸೇರಿದಂತೆ ಕೊಡವರ ಸಬಲೀಕರಣಕ್ಕೆ ಪೂರಕವಾಗಿರುವ ಸಂವಿಧಾನಬದ್ಧವಾದ ಹಲವು ಬೇಡಿಕೆಗಳ ಬಗ್ಗೆ ಜಾಗೃತಿ ಮೂಡಿಸಲಾಗುವುದು ಎಂದು ತಿಳಿಸಿದ್ದಾರೆ.