ಕಾರ್ಯಕ್ರಮದಲ್ಲಿ ಕೊಡಗು ಜಿಲ್ಲಾ ಮರಾಠ ಮರಾಟಿ ಸಮಾಜ ಸೇವಾ ಸಂಘದ ಉಪಾಧ್ಯಕ್ಷೆ ದೇವಕಿ ಜಿ.ಆರ್.ನಾಯ್ಕ, ಕಟ್ಟಡ ಸಮಿತಿ ಕಾರ್ಯದರ್ಶಿ ಎಂ.ಎಸ್.ಯೋಗೇಂದ್ರ, ಸಂಘದ ಸ್ಥಾಪನ ಸಂಘಟನಾ ಕಾರ್ಯದರ್ಶಿ ಬಿ.ಎ.ಗಣೇಶ್ ಕರಿಕೆ, ಸಂಘದ ಕಾರ್ಯಕಾರಿ ಮಂಡಳಿಯ ಹಿರಿಯ ಸದಸ್ಯ ಎಂ.ಟಿ.ದೇವಪ್ಪ, ಸಂಘದ ಕಾನೂನು ಸಲಹೆಗಾರರಾದ ಗುರುಪ್ರಸಾದ್ ಕಟ್ಟೆಮಾಡು, ಅಂಭಾಭವಾನಿ ಯುವಕ-ಯುವತಿ ಕ್ರೀಡಾ ಮತ್ತು ಮನೋರಂಜನಾ ಸಂಘದ ಅಧ್ಯಕ್ಷ ಎಂ.ಆರ್.ಮೋಹನ್, ಮಹಿಳಾ ವೇದಿಕೆ ಅಧ್ಯಕ್ಷೆ ರತ್ನಮಂಜರಿ ನರಸಿಂಹ, ಉಪಸಮಿತಿಗಳ ಅಧ್ಯಕ್ಷರಾದ ಕೆ.ಜಿ.ಹೊನ್ನಪ್ಪ, ಧನಂಜಯ್, ವೆಂಕಪ್ಪ, ನಿರಲ್ ಕುಮಾರ್, ಕೆ.ಜೆ.ಶಶಿಕಾಂತ್ ಇತರರಿದ್ದರು. ಕಾರ್ಯಕ್ರಮದಲ್ಲಿ ಗಂಗಾಧರ್ ಪ್ರಾರ್ಥಿಸಿದರೆ, ಸಂಘದ ಕಾರ್ಯದರ್ಶಿ ಹೂವಮ್ಮ ಸ್ವಾಗತಿಸಿದರು. ಟೀನಾ ನಾಯ್ಕ ನಿರೂಪಿಸಿದರೆ, ನರಸಿಂಹ ನಾಯ್ಕ ವಂದಿಸಿದರು.