ದೇಶದಲ್ಲಿ 3.60 ಲಕ್ಷ ಮೆಟ್ಟಿಕ್ ಟನ್ ಕಾಫಿ ಉತ್ಪಾದನೆ

ಕರ್ನಾಟಕ ರಾಜ್ಯ ಸಹಕಾರ ಮಹಾಮಂಡಳ, ಕೊಡಗು ಜಿಲ್ಲಾ ಸಹಕಾರ ಯೂನಿಯನ್, ಕೊಡಗು ಜಿಲ್ಲಾ ಸಹಕಾರ ಕೇಂದ್ರ ಬ್ಯಾಂಕ್, ಸಹಕಾರ ಇಲಾಖೆ ಹಾಗೂ ಪೆರಾಜೆ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಸಂಯುಕ್ತ ಆಶ್ರಯದಲ್ಲಿ ಪೆರಾಜೆಯ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಸಭಾಂಗಣದಲ್ಲಿ ನಡೆದ 72 ನೇ ಅಖಿಲ ಭಾರತ ಸಹಕಾರ ಸಪ್ತಾಹಕ್ಕೆ ಕಾಫಿ ಮಂಡಳಿ ಸದಸ್ಯ ತಳೂರು ಕಿಶೋರ್ ಕುಮಾರ್ ಚಾಲನೆ ನೀಡಿದರು. ಕೊಡಂದೇರ ಪಿ.ಗಣಪತಿ, ರಾಬಿನ್ ದೇವಯ್ಯ, ಅಧ್ಯಕ್ಷ ನಾಗೇಶ್ ಕುಂದಲ್ಪಾಡಿ ಮತ್ತಿತರರು ಇದ್ದರು.
ಕರ್ನಾಟಕ ರಾಜ್ಯ ಸಹಕಾರ ಮಹಾಮಂಡಳ, ಕೊಡಗು ಜಿಲ್ಲಾ ಸಹಕಾರ ಯೂನಿಯನ್, ಕೊಡಗು ಜಿಲ್ಲಾ ಸಹಕಾರ ಕೇಂದ್ರ ಬ್ಯಾಂಕ್, ಸಹಕಾರ ಇಲಾಖೆ ಹಾಗೂ ಪೆರಾಜೆ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಸಂಯುಕ್ತ ಆಶ್ರಯದಲ್ಲಿ ಪೆರಾಜೆಯ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಸಭಾಂಗಣದಲ್ಲಿ ನಡೆದ 72 ನೇ ಅಖಿಲ ಭಾರತ ಸಹಕಾರ ಸಪ್ತಾಹಕ್ಕೆ ಕಾಫಿ ಮಂಡಳಿ ಸದಸ್ಯ ತಳೂರು ಕಿಶೋರ್ ಕುಮಾರ್ ಚಾಲನೆ ನೀಡಿದರು. ಕೊಡಂದೇರ ಪಿ.ಗಣಪತಿ, ರಾಬಿನ್ ದೇವಯ್ಯ, ಅಧ್ಯಕ್ಷ ನಾಗೇಶ್ ಕುಂದಲ್ಪಾಡಿ ಮತ್ತಿತರರು ಇದ್ದರು.
Published on

ಪ್ರಮುಖ ಮುಖ್ಯಾಂಶಗಳು

  • ವಿಶ್ವ ಮಾರುಕಟ್ಟೆಯಲ್ಲಿ ಕಾಫಿಗೆ ಉತ್ತಮ ಬೇಡಿಕೆ
  • ಹೆಚ್ಚು ಹೆಚ್ಚು ಕಾಫಿ ಬೆಳೆಯುವಂತಾಗಬೇಕು
  • 2.30 ಲಕ್ಷ ಟನ್ ಕಾಫಿ ರಫ್ತು
ಮಡಿಕೇರಿ:
ಸರ್ಕಾರ ಕಾಫಿ ಬೆಳೆಗೆ ಹೆಚ್ಚಿನ ಉತ್ತೇಜನ ನೀಡುತ್ತಿದ್ದು, ವಿಶ್ವ ಮಾರುಕಟ್ಟೆಯಲ್ಲಿ ಬೇಡಿಕೆ ಇದೆ. ಆದ್ದರಿಂದ ಸಂಪಾಜೆ, ಕರಿಕೆ, ಪೆರಾಜೆ, ಚೆಂಬು ಭಾಗದಲ್ಲಿಯೂ ಕಾಫಿ ಬೆಳೆಯುವಂತಾಗಬೇಕು ಎಂದು ಕಾಫಿ ಮಂಡಳಿ ಸದಸ್ಯ ತಳೂರು ಕಿಶೋರ್ ಕುಮಾರ್ ಹೇಳಿದರು.
ಕರ್ನಾಟಕ ರಾಜ್ಯ ಸಹಕಾರ ಮಹಾಮಂಡಳ, ಕೊಡಗು ಜಿಲ್ಲಾ ಸಹಕಾರ ಯೂನಿಯನ್, ಕೊಡಗು ಜಿಲ್ಲಾ ಸಹಕಾರ ಕೇಂದ್ರ ಬ್ಯಾಂಕ್, ಸಹಕಾರ ಇಲಾಖೆ ಹಾಗೂ ಪೆರಾಜೆ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಸಂಯುಕ್ತ ಆಶ್ರಯದಲ್ಲಿ ಪೆರಾಜೆಯ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಸಭಾಂಗಣದಲ್ಲಿ ಶುಕ್ರವಾರ ನಡೆದ 72 ನೇ ಅಖಿಲ ಭಾರತ ಸಹಕಾರ ಸಪ್ತಾಹಕ್ಕೆ ಚಾಲನೆ ಹಾಗೂ ಕಾರ್ಯದಕ್ಷತೆ, ಉತ್ತರದಾಯಿತ್ವ ಮತ್ತು ಪಾರದರ್ಶಕತೆಯನ್ನು ಹೆಚ್ಚಿಸಲು ಡಿಜಿಟಲೀಕರಣವನ್ನು ಪ್ರೋತ್ಸಾಹಿಸುವ ದಿನಾಚರಣೆಯಲ್ಲಿ ಪಾಲ್ಗೊಂಡು ಮಾತನಾಡಿದರು.
ಸರ್ಕಾರ ಕಾಫಿ ಉತ್ಪಾದನೆಗೆ ಸಹಾಯಧನ ಕಲ್ಪಿಸುತ್ತಿದೆ. ಜತೆಗೆ ಪ್ರೋತ್ಸಾಹ ನೀಡುತ್ತಿದೆ. ಹಾಗಾಗಿ ಅಡಿಕೆ, ರಬ್ಬರ್, ಗೇರು ಜತೆಗೆ ಕಾಫಿ ಬೆಳೆಯಲು ಪ್ರಯತ್ನಿಸಬೇಕು. ದೇಶವು 3.60 ಲಕ್ಷ ಮೆಟ್ರಿಕ್ ಟನ್ ಕಾಫಿ ಉತ್ಪಾದಿಸುತ್ತಿದ್ದು, ಇದರಲ್ಲಿ 2.30 ಲಕ್ಷ ಮೆಟ್ರಿಕ್ ಟನ್ ಕಾಫಿಯನ್ನು ವಿದೇಶಕ್ಕೆ ರಫ್ತು ಮಾಡಲಾಗುತ್ತಿದೆ. ಉಳಿದಂತೆ 1.50 ಲಕ್ಷ ಮೆಟ್ರಿಕ್ ಟನ್ ದೇಶದಲ್ಲಿಯೇ ವ್ಯಾಪಾರ ಆಗುತ್ತಿದೆ.
ರಾಜ್ಯವು ಕಾಫಿ ಉತ್ಪಾದನೆಯಲ್ಲಿ ಶೇ.60 ರಿಂದ 65 ರಷ್ಟು, ಕೊಡಗು ಜಿಲ್ಲೆ ಕಾಫಿ ಉತ್ಪಾದನೆಯಲ್ಲಿ ಶೇ.30 ರಿಂದ 35 ರಷ್ಟು, ಹಾಗೆಯೇ ಚಿಕ್ಕಮಗಳೂರು ಮತ್ತು ಹಾಸನ ಜಿಲ್ಲೆಯಿಂದ ಶೇ.25 ರಿಂದ 30 ರಷ್ಟು, ಕೇರಳ, ತಮಿಳುನಾಡು, ಆಂದ್ರ ಪ್ರದೇಶದಲ್ಲಿ ಶೇ.20 ರಿಂದ 30 ರಷ್ಟು ಈಶಾನ್ಯ ರಾಜ್ಯಗಳಲ್ಲಿ ಶೇ.10 ರಿಂದ 15 ರಷ್ಟು ಕೊಡುಗೆ ನೀಡುತ್ತಿದೆ. ದೇಶದಲ್ಲಿ 15 ಸಾವಿರ ಕೋಟಿ ರೂ. ವಿದೇಶಿ ವಿನಿಮಯ ಕಾಫಿ ಉತ್ಪಾದನೆಯಿಂದ ಆಗುತ್ತಿದ್ದು, 2047 ಕ್ಕೆ 50 ಸಾವಿರ ಕೋಟಿ ರೂ. ವಿದೇಶಿ ವಿನಿಮಯ ಗುರಿ ಹೊಂದಲಾಗಿದೆ ಎಂದರು.
ಕೊಡಗು ಜಿಲ್ಲಾ ಸಹಕಾರ ಕೇಂದ್ರ ಬ್ಯಾಂಕ್ ಅಧ್ಯಕ್ಷ ಕೊಡಂದೇರ ಪಿ.ಗಣಪತಿ ಮಾತನಾಡಿ ಸಹಕಾರ ಕ್ಷೇತ್ರ ಇಡೀ ವಿಶ್ವದಲ್ಲಿ ಬೃಹತ್ ಆಗಿ ಬೆಳೆದಿದ್ದು, ಇದನ್ನು ಮತ್ತಷ್ಟು ಬಲಪಡಿಸಿ ಕೃಷಿಕರಿಗೆ ಅನುಕೂಲವಾಗುವ ನಿಟ್ಟಿನಲ್ಲಿ ಪ್ರತಿಯೊಬ್ಬರೂ ಶ್ರಮಿಸಬೇಕು ಎಂದರು.
ಕೊಡಗು ಜಿಲ್ಲಾ ಸಹಕಾರ ಯೂನಿಯನ್ ಅಧ್ಯಕ್ಷ ರಾಬಿನ್ ದೇವಯ್ಯ ಮಾತನಾಡಿ ಸಹಕಾರ ಕ್ಷೇತ್ರಕ್ಕೆ 121 ವರ್ಷಗಳ ಇತಿಹಾಸವಿದ್ದು, ಸಿದ್ದನೆಗೌಡ ಪಾಟೀಲ ಅವರು ಸಹಕಾರ ಕ್ಷೇತ್ರಕ್ಕೆ ಅಪಾರ ಕೊಡುಗೆ ನೀಡಿದ್ದಾರೆ. ಹಾಗೆಯೇ ಜಿಲ್ಲೆಯಲ್ಲಿ ಹಿರಿಯರು ಸಹಕಾರ ಕ್ಷೇತ್ರ ಬಲವರ್ಧನೆಗೆ ಶ್ರಮಿಸಿದ್ದಾರೆ ಎಂದು ಹೇಳಿದರು.
ಪೆರಾಜೆ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಅಧ್ಯಕ್ಷ ನಾಗೇಶ್ ಕುಂದಲ್ಪಾಡಿ ಮಾತನಾಡಿ ಪೆರಾಜೆ ಸಹಕಾರ ಸಂಘ ಸ್ಥಾಪಿಸುವಲ್ಲಿ ಡಿಸಿಸಿ ಬ್ಯಾಂಕ್ ಹೆಚ್ಚಿನ ಸಹಕಾರ ನೀಡಿದೆ. ಪ್ರತಿಯೊಂದು ಕ್ಷೇತ್ರದಲ್ಲೂ ಆರ್ಥಿಕ ಶಿಸ್ತು ಇದ್ದಾಗ ಅಭಿವೃದ್ಧಿ ಸಾಧ್ಯ. ಪೆರಾಜೆ, ಚೆಂಬು, ಸಂಪಾಜೆ ಭಾಗದವರು ಅಡಿಕೆಯನ್ನು ನಂಬಿ ಬದುಕುತ್ತಾರೆ. ಅಡಿಕೆ ರೋಗದಿಂದ ಆದಾಯ ಕಡಿಮೆಯಾಗಿದೆ. ಈಗ ಸದ್ಯಕ್ಕೆ ಮಿಶ್ರ ಬೆಳೆ ಬೆಳೆಯುವಂತಾಗಬೇಕು ಎಂದು ಹೇಳಿದರು.
ಕೊಡಗು ಜಿಲ್ಲಾ ಸಹಕಾರ ಯೂನಿಯನ್‌ನ ನಿರ್ದೇಶಕ ಎ.ಕೆ. ಮನುಮುತ್ತಪ್ಪ, ಕೊಡಗು ಜಿಲ್ಲಾ ಸಹಕಾರ ಯೂನಿಯನ್ ನಿರ್ದೇಶಕಿ ಶ್ಯಾಮಲಾ ಮಾತನಾಡಿದರು.
ಕೊಡಗು ಜಿಲ್ಲಾ ಸಹಕಾರ ಯೂನಿಯನ್ ನಿರ್ದೇಶಕರಾದ ಕೆ.ಎಂ. ತಮ್ಮಯ್ಯ, ವಿ.ಕೆ. ಅಜಯ್ ಕುಮಾರ್, ಬಲ್ಲಾರಂಡ ಮಣಿಉತ್ತಪ್ಪ, ಎಸ್.ಆರ್. ಸುನಿಲ್ ರಾವ್, ಎಂ.ಟಿ.ಸುಬ್ಬಯ್ಯ, ಪಿ.ಎನ್. ಚಂದ್ರಪ್ರಕಾಶ್, ಕೆ.ಎನ್.ಸತೀಶ್, ಸಹಕಾರ ಸಂಘಗಳ ಉಪ ನಿಬಂಧಕ ಎಚ್.ಡಿ. ರವಿಕುಮಾರ್, ಪೆರಾಜೆ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಉಪಾಧ್ಯಕ್ಷ ಪಿ.ಎಂ. ಅಶೋಕ್, ಕೊಡಗು ಜಿಲ್ಲಾ ಸಹಕಾರ ಯೂನಿಯನ್‌ನ ಸಿಇಒ ಯೋಗೇಂದ್ರ ನಾಯಕ್, ಪೆರಾಜೆ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಸಿಇಒ ಲೋಕೇಶ್ ಇತರರು ಇದ್ದರು.
ಸಹಕಾರ ಸಪ್ತಾಹ ಸಂದರ್ಭದಲ್ಲಿ ಆರೋಗ್ಯ ಉಚಿತ ತಪಾಸಣೆ ನಡೆಯಿತು. ಸಂಜೀವಿನಿ ಒಕ್ಕೂಟದ ಸದಸ್ಯರಿಂದ ತರಕಾರಿ ಹಾಗೂ ವಿವಿಧ ವಸ್ತುಗಳ ಮಾರಾಟ ಮೇಳ ಏರ್ಪಡಿಸಲಾಗಿತ್ತು.
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net