5 ತಿಂಗಳ ಬಾಕಿ ಮುಂದಿನ ದಿನಗಳಲ್ಲಿ ಬಿಡುಗಡೆ

ವಿರಾಜಪೇಟೆ ತಾಲೂಕು ಪಂಚಾಯಿತಿಯ ಸಾಮರ್ಥ್ಯ ಸೌಧದಲ್ಲಿ ಆಯೋಜಿಸಿದ್ದ ಸಭೆಯಲ್ಲಿ ಪ್ರಶಾಂತ್, ಅಪ್ಪಣ್ಣ ಪಾಲ್ಗೊಂಡಿದ್ದರು.
ವಿರಾಜಪೇಟೆ ತಾಲೂಕು ಪಂಚಾಯಿತಿಯ ಸಾಮರ್ಥ್ಯ ಸೌಧದಲ್ಲಿ ಆಯೋಜಿಸಿದ್ದ ಸಭೆಯಲ್ಲಿ ಪ್ರಶಾಂತ್, ಅಪ್ಪಣ್ಣ ಪಾಲ್ಗೊಂಡಿದ್ದರು.
Published on

ಪ್ರಮುಖ ಮುಖ್ಯಾಂಶಗಳು

  • ಗ್ಯಾರಂಟಿ ಅನುಷ್ಠಾನ ಸಮಿತಿಯ ಪ್ರಗತಿ ಪರಿಶೀಲನಾ ಸಭೆ
ಪೊನ್ನಂಪೇಟೆ: ತಾಲೂಕು ವ್ಯಾಪ್ತಿಯಲ್ಲಿ ಗೃಹಲಕ್ಷ್ಮಿ ಯೋಜನೆಯಡಿ ಒಟ್ಟು 1.17 ಫಲಾನುಭವಿಗಳಿಗೆ ಸೆಪ್ಟೆಂಬರ್‌ವರೆಗೆ ಹಣ ಪಾವತಿಯಾಗಿದ್ದು, ಉಳಿದ 5 ತಿಂಗಳ ಬಾಕಿ ಮುಂದಿನ ದಿನಗಳಲ್ಲಿ ಬಿಡುಗಡೆಯಾಗಲಿದೆ.
ಗ್ಯಾರಂಟಿ ಯೋಜನೆಗಳ ತಾಲೂಕು ಅಧ್ಯಕ್ಷ ಪ್ರಶಾಂತ್ ಅಧ್ಯಕ್ಷತೆಯಲ್ಲಿ ವಿರಾಜಪೇಟೆ ತಾಲೂಕು ಪಂಚಾಯಿತಿಯ ಸಾಮರ್ಥ್ಯ ಸೌಧದಲ್ಲಿ ಗುರುವಾರ ಆಯೋಜಿಸಿದ್ದ ಗ್ಯಾರಂಟಿ ಅನುಷ್ಠಾನ ಸಮಿತಿಯ ಪೊನ್ನಂಪೇಟೆ ತಾಲೂಕು ಪ್ರಗತಿ ಪರಿಶೀಲನಾ ಸಭೆಯಲ್ಲಿ ಸಂಬಂಧಪಟ್ಟ ಅಧಿಕಾರಿಗಳು ಸಭೆಗೆ ಮೇಲಿನಂತೆ ಮಾಹಿತಿ ನೀಡಿದರು.
ಸೆಪ್ಟೆಂಬರ್ ತಿಂಗಳವರೆಗೆ 720 ಹೊಸ ಫಲಾನುಭವಿಗಳು ಹೆಸರು ನೋಂದಾಯಿಸಿಕೊಂಡಿದ್ದಾರೆ. ಐಟಿ ಮತ್ತು ಜಿಎಸ್‌ಟಿ ಪಾವತಿ ಮಾಡುತ್ತಿರುವ ಫಲನುಭವಿಗಳಲ್ಲಿ ಕೆಲವು ತಾಂತ್ರಿಕ ದೋಷಗಳು ಕಂಡು ಬರುತ್ತಿದ್ದು, ಈ ಬಗ್ಗೆ ಸರ್ಕಾರದ ಗಮನಕ್ಕೆ ತಂದು ಸಮಸ್ಯೆ ಬಗೆಹರಿಸುವ ಕುರಿತು ಚರ್ಚಿಸಲಾಯಿತು.
ಸರ್ಕಾರ ಹೊಸದಾಗಿ ಮಹಿಳೆಯರಿಗಾಗಿ ಗೃಹಲಕ್ಷ್ಮಿ ವಿವಿಧೋದ್ದೇಶ ಸಹಕಾರ ಸಂಘವನ್ನು ರಚಿಸಿದ್ದು ಮೊದಲ ಹಂತದಲ್ಲಿ ಈಗಾಗಲೇ ತಾಲೂಕಿನಲ್ಲಿ ಫಲಾನುಭವಿಗಳನ್ನು ಆಯ್ಕೆ ಮಾಡಲಾಗಿದೆ. 1250 ರೂ. ಪಾವತಿ ಮಾಡಿ ನೋಂದಾಯಿಸಿಕೊಳ್ಳುವ ಮೂಲಕ ಮಹಿಳೆಯರಿಗೆ 3 ಸಾವಿರದಿಂದ 3 ಲಕ್ಷ ರೂ.ವರೆಗೂ ಸಾಲ ಸೌಲಭ್ಯ ಪಡೆದುಕೊಳ್ಳಬಹುದಾಗಿದೆ ಎಂದು ಅಧಿಕಾರಿಗಳು ಸಭೆಗೆ ಮಾಹಿತಿ ನೀಡಿದರು.
ಅನ್ನಭಾಗ್ಯ ಯೋಜನೆಯಡಿ ಅರ್ಜಿ ಸಲ್ಲಿಸಿದ ಫಲಾನುಭವಿಗಳಿಗೆ ಪಡಿತರ ಚೀಟಿ ಪಡೆದುಕೊಳ್ಳುವ ಅವಕಾಶ ಕಲ್ಪಿಸಲಾಗಿದೆ. ಅರ್ಜಿ ಸಲ್ಲಿಸಿದ ಫಲಾನುಭವಿಗಳು ಸದುಪಯೋಗವನ್ನು ಪಡೆದುಕೊಳ್ಳುವಂತೆ ಆಹಾರ ನಿರೀಕ್ಷಕರು ಮನವಿ ಮಾಡಿದರು.
ತೆರಿಗೆದಾರರು, ಪಿಎಂ ಕಿಸಾನ್ ಕಾರ್ಡ್ ಹೊಂದಿರುವವರ ಆದಾಯ ಪ್ರಮಾಣಪತ್ರಗಳನ್ನು ಪರಿಶೀಲಿಸಿ ಬದಲಾವಣೆ ಮಾಡಲಾಗುತ್ತಿದೆ. ಕೆಲವೊಂದು ತಪ್ಪಾಗಿ ಬಡವರ ಬಿಪಿಎಲ್ ಎಪಿಎಲ್ಗೆ ಪರಿವರ್ತನೆಯಾಗಿದ್ದು, ಇಂತಹ ಸಮಸ್ಯೆಗಳನ್ನು ಬಗೆಹರಿಸಲು ಸಭೆಯಲ್ಲಿ ಕೋರಲಾಯಿತು.
ಸಭೆಯಲ್ಲಿ ಶಕ್ತಿ ಯೋಜನೆ, ಗೃಹಜ್ಯೋತಿ, ಯುವ ನಿಧಿ ಯೋಜನೆಗಳ ಕುರಿತು ಚರ್ಚಿಸಲಾಯಿತು. ವಿರಾಜಪೇಟೆ ತಾ.ಪಂ.ಇಒ ಕೆ.ಸಿ.ಅಪ್ಪಣ್ಣ, ಗ್ಯಾರಂಟಿ ಯೋಜನೆ ಸದಸ್ಯರು ಹಾಗೂ ವಿವಿಧ ಇಲಾಖೆಯ ಅಧಿಕಾರಿಗಳು ಉಪಸ್ಥಿತರಿದ್ದರು.
ಚಿತ್ರ ಶಿರ್ಷಿಕೆ:22ಠಿ04
ಚಿತ್ರ ಶಿರ್ಷಿಕೆ:22ಠಿ05
ವಿರಾಜಪೇಟೆ ತಾಲೂಕು ಪಂಚಾಯಿತಿಯ ಸಾಮರ್ಥ್ಯ ಸೌಧದಲ್ಲಿ ಆಯೋಜಿಸಿದ್ದ ಸಭೆಯಲ್ಲಿ ಗ್ಯಾರಂಟಿ ಯೋಜನೆ ಸದಸ್ಯರು ಹಾಗೂ ವಿವಿಧ ಇಲಾಖೆಗಳ ಅಧಿಕಾರಿಗಳು ಭಾಗವಹಿಸಿದ್ದರು.
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net