

ಸೋಮವಾರಪೇಟೆ: ಕೇವಲ ಒಂದು ವರ್ಷ ಮೂರು ತಿಂಗಳ ವಯಸ್ಸಿನಲ್ಲೇ 100 ಮೀಟರ್ ಓಟವನ್ನು 57 ಸೆಕೆಂಡುಗಳಲ್ಲಿ ಪೂರ್ಣಗೊಳಿಸುವ ಮೂಲಕ ಕೊಡಗು ಜಿಲ್ಲೆಯ ಸೋಮವಾರಪೇಟೆ ತಾಲೂಕಿನ ಗೆಜ್ಜೆಹಣಕೋಡು ಗ್ರಾಮದ ಎಚ್.ಎಲ್.ಕಾವೇರಿ, ಮಹೇಂದ್ರ ಕುಮಾರ್ ದಂಪತಿಯ ಪುತ್ರ ಎಂ.ಇವಾನ್ ಪ್ರಿನ್ಸ್ ನ್ಯಾಷನಲ್ ಬುಕ್ ಆಫ್ ರೆಕಾರ್ಡ್ಸ್ನಲ್ಲಿ ಸ್ಥಾನ ಪಡೆದು ಗಮನ ಸೆಳೆದಿದ್ದಾನೆ.
2025ರ ಏಪ್ರಿಲ್ 4ರಂದು ಜನಿಸಿರುವ ಇವಾನ್ ಪ್ರಿನ್ಸ್, ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಹೊಸಕೋಟೆ ತಾಲೂಕಿನ ಲಾಲ್ಬಾಗ್ ದಾಸರಹಳ್ಳಿಯಲ್ಲಿ ಗ್ರಾಮದಲ್ಲಿ ವಾಸವಾಗಿದ್ದಾನೆ.
ಇವರ ತಾಯಿ ಕಾವೇರಿ ಅವರು ರಾಜ್ಯ ಹಾಗೂ ರಾಷ್ಟ್ರೀಯಮಟ್ಟದ ಹಾಕಿ ಕ್ರೀಡಾಪಟುವಾಗಿದ್ದು, ಕ್ರೀಡಾ ಹಿನ್ನೆಲೆಯ ಕುಟುಂಬದಲ್ಲಿ ಬೆಳೆದಿರುವ ಇವಾನ್ ಚಿಕ್ಕ ವಯಸ್ಸಿನಲ್ಲಿಯೇ ಓಟದ ಸ್ಪರ್ಧೆಯಲ್ಲಿ ವಿಶೇಷ ಆಸಕ್ತಿ ತೋರಿದ್ದಾನೆ. ತನ್ನ ಕ್ರೀಡಾ ಚಟುವಟಿಕೆ ಹಾಗೂ ಸಾಧನೆಯ ಮೂಲಕ ಗಮನ ಸೆಳೆದಿರುವ ಬಾಲಕನ 100 ಮೀಟರ್ ಓಟದ ಸಾಧನೆ ನ್ಯಾಷನಲ್ ಬುಕ್ ಆಫ್ ರೆಕಾರ್ಡ್ಸ್ನಲ್ಲಿ ದಾಖಲಾಗಿದೆ. ಇಚೆಗೆ ಕಂಠೀರವ ಸ್ಟೇಡಿಯಂನಲ್ಲಿ ಈ ಆಯ್ಕೆ ನಡೆಯಿತು. ಮುಂದಿನ ದಿನಗಳಲ್ಲಿ ಕ್ರೀಡಾ ಕ್ಷೇತ್ರದಲ್ಲಿ ಮತ್ತಷ್ಟು ಸಾಧನೆ ಮಾಡಿ ರಾಜ್ಯ, ರಾಷ್ಟ್ರ ಹಾಗೂ ಅಂತಾರಾಷ್ಟ್ರೀಯ ಮಟ್ಟದಲ್ಲಿ ಗುರುತಿಸಿಕೊಳ್ಳುವುದು ಇವಾನ್ನ ಗುರಿಯಾಗಿದೆ.