

ರಾಜ್ಯದಲ್ಲಿ ಈಗಾಗಲೇ ಎಲ್ಲಾ ಪ್ರಾಥಮಿಕ ಆರೋಗ್ಯ ಕೇಂದ್ರ, ಸಮುದಾಯ ಆರೋಗ್ಯ ಕೇಂದ್ರ, ತಾಲೂಕು ಸಾರ್ವಜನಿಕ ಆಸ್ಪತ್ರೆ ಹಾಗೂ ಜಿಲ್ಲಾಸ್ಪತ್ರೆಗಳಲ್ಲಿ ಆ್ಯಂಟಿ ಸ್ನೇಕ್ ವೆನಮ್ ಸಾಕಷ್ಟು ದಾಸ್ತಾನು ಇರಿಸಿಕೊಳ್ಳಲಾಗಿದೆ. ಈ ಪ್ರಕರಣಗಳಲ್ಲಿ ಉಚಿತ ಚಿಕಿತ್ಸೆ ನೀಡಲಾಗುತ್ತದೆ. ರಾಜ್ಯದ ಎಲ್ಲಾ ತಾಲೂಕು ಹಾಗೂ ಜಿಲ್ಲಾ ಆಸ್ಪತ್ರೆಗಳನ್ನು ಹಾವು ಕಡಿತ ಚಿಕಿತ್ಸಾ ಕೇಂದ್ರಗಳಾಗಿ ಗುರುತಿಸಲಾಗಿದ್ದು, ಈ ಆಸ್ಪತ್ರೆಗಳಲ್ಲಿ ದಿನದ 24 ಗಂಟೆಯೂಹಾವು ಕಡಿತಕ್ಕೆ ಚಿಕಿತ್ಸೆ ಹಾಗೂ ಕಡಿತದಿಂದ ಉಂಟಾಗುವ ಬೇರೆ ಬೇರೆ ತೊಂದರೆಗಳಿಗೆ ಚಿಕಿತ್ಸೆ ನೀಡಲಾಗುತ್ತಿದೆ. ಖಾಸಗಿ ಆಸ್ಪತ್ರೆಗಳಲ್ಲಿ ಮುಂಗಡ ಹಣಕ್ಕಾಗಿ ಒತ್ತಾಯಿಸದೆ ಹಾವು ಕಡಿತಕ್ಕೆ ಒಳಗಾದವರಿಗೆ ತಕ್ಷಣ ಜೀವ ಉಳಿಸುವ ಚಿಕಿತ್ಸೆ ಆರಂಭಿಸುವAತೆ ಸೂಚಿಸಲಾಗಿದೆ.