ಮಾ.22 ರಂದು ಪುರುಷರ ವಿಭಾಗದಲ್ಲಿ ಹಗ್ಗಜಗ್ಗಾಟ, ಭಾರದ ಗುಂಡು ಎಸೆತ, 100 ಮೀಟರ್ ಓಟ, ಮಹಿಳೆಯರಿಗಾಗಿ ಥ್ರೋಬಾಲ್, ಹಗ್ಗಜಗ್ಗಾಟ, ಭಾರದ ಗುಂಡು ಎಸೆತ, ನಿಂಬೆ ಚಮಚ ಓಟ, ಸೂಜಿ ನೂಲು ಓಟ, 100 ಮೀಟರ್ ಓಟ, ಸಂಗೀತ ಖುರ್ಚಿ, ಬಾಲಕಿಯರಿಗೆ ನಿಂಬೆ ಚಮಚ ಓಟ, ಸೂಜಿ ನೂಲು ಓಟ, 50 ಮೀಟರ್ ಓಟ, 100 ಮೀಟರ್ ಓಟ, 10 ವರ್ಷದೊಳಗಿನ ಬಾಲಕ ಮತ್ತು ಬಾಲಕಿಯರಿಗೆ ಕಪ್ಪೆ ಜಿಗಿತ ಓಟ 50 ಮೀಟರ್, 5 ವರ್ಷದೊಳಗಿನ ಮಕ್ಕಳಿಗೆ ಕಾಳು ಹೆಕ್ಕುವುದು, ಪುರುಷರು, ಮಹಿಳೆಯರು, ಮಕ್ಕಳು ಹಾಗೂ ಹಿರಿಯ ನಾಗರೀಕರಿಗಾಗಿ ಬಕೆಟ್ ಗೆ ಚೆಂಡು ಹಾಕುವುದು, 50 ವರ್ಷ ಮೇಲಿನ ಪುರುಷ ಮತ್ತು ಮಹಿಳೆಯರಿಗಾಗಿ 100 ಮೀಟರ್ ನಡಿಗೆ ಸ್ಪರ್ಧೆ ನಡೆಯಲಿದೆ.