ಕಾವೇರಿ ಕಣಿವೆಯ ಪ್ರಮುಖ ಜಲಾಶಯ ಆಗಿರುವ ಕುಶಾಲನಗರ ತಾಲೂಕು ಹಾರಂಗಿ ಅಣೆಕಟ್ಟೆಯಲ್ಲಿ ಕಳೆದ ವರ್ಷಕ್ಕೆ ಹೋಲಿಸಿದರೆ 24.5 ಅಡಿಗಳಷ್ಟು ನೀರಿನ ಸಂಗ್ರಹ ಪ್ರಮಾಣ ಕಡಿಮೆ ಆಗಿದೆ. 2,859 ಅಡಿ ಎತ್ತರದ ಹಾರಂಗಿ ಅಣೆಕಟ್ಟೆಯಲ್ಲಿ ಶನಿವಾರದ ಮಾಹಿತಿ ಪ್ರಕಾರ 2,826.32 ಅಡಿಗಳಷ್ಟು ಮಾತ್ರ ನೀರಿದೆ. ಕಳೆದ ವರ್ಷ ಇದೇ ದಿನ 2,850.84 ಅಡಿಗಳಷ್ಟು ನೀರಿತ್ತು. ಪ್ರಸ್ತುತ ಜಲಾಶಯಕ್ಕೆ ಕೇವಲ 338 ಕ್ಯೂಸೆಕ್ ಮಾತ್ರ ನೀರಿನ ಒಳಹರಿವು ಇದೆ. ನದಿಗೆ 180 ಕ್ಯೂಸೆಕ್ ನೀರು ಬಿಡಲಾಗುತ್ತಿದೆ. ಕಾಲುವೆಗೆ ಯಾವುದೇ ನೀರು ಬಿಡುತ್ತಿಲ್ಲ. ಕಳೆದ ವರ್ಷ ಇದೇ ದಿನ 7,445 ಕ್ಯೂಸೆಕ್‌ನಷ್ಟು ನೀರಿನ ಒಳಹರಿವು ಇತ್ತು. ನದಿಗೆ 7,833 ಸಾವಿರ ಕ್ಯೂಸೆಕ್ ನೀರು ಬಿಡಲಾಗುತ್ತಿತ್ತು. 8.5 ಟಿಎಂಸಿ ನೀರಿನ ಸಂಗ್ರಹ ಸಾಮರ್ಥ್ಯದ ಜಲಾಶಯದಲ್ಲಿ ಈಗ 3.150 ಟಿಎಂಸಿ ನೀರಿದೆ. ಕಳೆದ ವರ್ಷ ಈ ಅವಧಿಯಲ್ಲಿ 6.104 ಟಿಎಂಸಿ ನೀರಿನ ಸಂಗ್ರಹ ಇತ್ತು.