ಸಿಎಂಸಿಎ ಸಂಸ್ಥೆ ಬೆಂಗಳೂರು ಹಾಗೂ ನಾವು ಪ್ರತಿಷ್ಠಾನ ಟ್ರಸ್ಟ್ ಕೊಡಗು ಮತ್ತು ಹಂಡ್ಲಿ ಗ್ರಾ.ಪಂ. ಸಂಯುಕ್ತ ಆಶ್ರಯದಲ್ಲಿ ಆಯೋಜಿಸಲಾಗಿದ್ದ, ಹಂಡ್ಲಿ ಸರ್ಕಾರಿ ಪ್ರೌಢಶಾಲಾ ವಿದ್ಯಾರ್ಥಿನಿ ಸೃಷ್ಟಿ ಮತ್ತು ಗ್ರಾ.ಪಂ. ಅಧ್ಯಕ್ಷೆ ಸುಧಾ ಈರೇಶ್ ಅಧ್ಯಕ್ಷತೆ ವಹಿಸಿದ್ದ ಮಕ್ಕಳ ಗ್ರಾಮ ಸಭೆಯಲ್ಲಿ ಮೊದಲಿಗೆ ನಾವು ಪ್ರತಿಷ್ಠಾನ ಟ್ರಸ್ಟ್ ನಿರ್ದೇಶಕಿ ಸುಮನಾ ಮ್ಯಾಥ್ಯೂ ಮಕ್ಕಳ ಹಕ್ಕುಗಳು, ಸರ್ಕಾರದ ಸಂಬಂಧಪಟ್ಟ ಇಲಾಖೆಗಳು, ಅಧಿಕಾರಿಗಳು ಸ್ಪಂದಿಸುವ ಜವಾಬ್ದಾರಿ, ಮಕ್ಕಳ ಆರೋಗ್ಯ, ಮಕ್ಕಳ ಸುರಕ್ಷತೆ, ಮಕ್ಕಳ ರಕ್ಷಣೆಗೆ ಇರುವ ಕಾನೂನು ಕಾಯ್ದೆಗಳು, ಮಕ್ಕಳ ಗ್ರಾಮಸಭೆಯನ್ನು ನಡೆಸುವ ಉದ್ದೇಶ ಇವುಗಳ ಕುರಿತು ಪ್ರಸ್ತಾವಿಕವಾಗಿ ಮಾತನಾಡಿದರು.