ಕಾಫಿ ತೋಟಗಳಲ್ಲಿ ಕಾಡಾನೆಗಳ ಹಿಂಡು

ಕಾವೇರಿ ದಾಟಿದ ಕಾಡಾನೆಗಳ ಹಿಂಡು.
ಕಾವೇರಿ ದಾಟಿದ ಕಾಡಾನೆಗಳ ಹಿಂಡು.
Published on
ಸಿದ್ದಾಪುರ: ಆಹಾರ ಅರಸಿ ಕಾಡಿನಿಂದ ಹೊರಬಂದ ಕಾಡಾನೆಗಳ ಹಿಂಡು ಕಾವೇರಿ ನದಿ ದಾಟಿ ಗುಹ್ಯ ಗ್ರಾಮದ ಕಾಫಿ ತೋಟಗಳಿಗೆ ನುಗ್ಗಿ ಬೆಳೆ ಹಾನಿ ಮಾಡಿವೆ.
ಮರಿಗಳೊಂದಿಗೆ ಇಪ್ಪತ್ತಕ್ಕೂ ಹೆಚ್ಚು ಕಾಡಾನೆಗಳು ನದಿ ದಾಟಿ ಬಂದಿರುವುದು ಸ್ಥಳೀಯರಲ್ಲಿ ಆತಂಕ ಮೂಡಿಸಿದೆ. ಮೀನ್‌ಕೊಳ್ಳಿ ಅರಣ್ಯ ಪ್ರದೇಶದಿಂದ ಅರೆಕಾಡು ಬಳಂಜಿಗೆರೆ ಮಾರ್ಗವಾಗಿ ಕಾವೇರಿ ನದಿಯನ್ನು ದಾಟಿದ ಕಾಡಾನೆಗಳು ಗುಹ್ಯ ಗ್ರಾಮದ ಕಾಫಿ ತೋಟಗಳಲ್ಲಿ ಬಿಡುಬಿಟ್ಟು ಅಪಾರ ಪ್ರಮಾಣದ ಕೃಷಿ ಫಸಲು ನಾಶಪಡಿಸುತ್ತಿವೆ. ತೋಟಗಳಿಗೆ ಕೆಲಸಕ್ಕೆ ತೆರಳಿದ್ದ ಕಾರ್ಮಿಕರು ಕಾಡಾನೆಗಳ ಹಿಂಡು ಕಂಡು ಭಯಭೀತರಾಗಿ ಪಾವಸಾಗಿದ್ದಾರೆ. ಕಾಡಾನೆಗಳನ್ನು ವಾಪಸ್ ಅರಣ್ಯಕ್ಕೆ ಓಡಿಸಬೇಕು ಎಂದು ಸ್ಥಳೀಯರು ಆಗ್ರಹಿಸಿದ್ದಾರೆ.
ಕಾಡಾನೆ ದಾಳಿಗೆ ಹಸು ಬಲಿ
ಸಿದ್ದಾಪುರ: ನೆಲ್ಯಹುದಿಕೇರಿ ಗ್ರಾಮದ ನಾಲ್ಕನೇ ವಿಭಾಗದ ನಿವಾಸಿ ಶೇಖರ್ ಎಂಬುವರು ಕೊಟ್ಟಿಗೆಯಲ್ಲಿ ಕಟ್ಟಿ ಹಾಕಿದ್ದ ಗರ್ಭ ಧರಿಸಿದ್ದ ಹಸುವನ್ನು ಕಾಡಾನೆ ತುಳಿದು ಕೊಂದು ಹಾಕಿದೆ. ಸೋಮವಾರ ತಡರಾತ್ರಿ ಕೊಟ್ಟಿಗೆಗೆ ನುಗ್ಗಿದ ಕಾಡಾನೆ ಹಸುವನ್ನು ತುಳಿದ ಪರಿಣಾಮ ಮೃತಪಟ್ಟಿದೆ. ಅರಣ್ಯ ಇಲಾಖೆ ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಕಾಡಾನೆಗಳನ್ನು ತಕ್ಷಣ ಅರಣ್ಯ ಪ್ರದೇಶಕ್ಕೆ ಓಡಿಸಬೇಕು. ನಷ್ಟಕ್ಕೊಳಗಾದ ರೈತನಿಗೆ ಪರಿಹಾರ ನೀಡಬೇಕು ಎಂದು ಗ್ರಾಮಸ್ಥರು ಒತ್ತಾಯಿಸಿದ್ದಾರೆ.
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net