ಘಟನೆಯ ಮಾಹಿತಿ ತಿಳಿಯುತ್ತಿದ್ದಂತೆ ಅರಣ್ಯ ಇಲಾಖೆಯ ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಕಾಂಡನಕೊಲ್ಲಿ ಹಾಗೂ ಸುತ್ತಮುತ್ತಲಿನ ಪ್ರದೇಶಗಳಲ್ಲಿ ಕಳೆದ ಕೆಲವು ದಿನಗಳಿಂದ ಕಾಡಾನೆಗಳ ಹಾವಳಿ ಹೆಚ್ಚಾಗಿರುವ ಹಿನ್ನೆಲೆಯಲ್ಲಿ ಗ್ರಾಮಸ್ಥರು ಆತಂಕಗೊಂಡಿದ್ದಾರೆ. ರಾತ್ರಿ ವೇಳೆಯಲ್ಲಿ ಹೊರಗಡೆ ಓಡಾಡಲು ಭಯದ ವಾತಾವರಣ ನಿರ್ಮಾಣವಾಗಿದ್ದು, ಅರಣ್ಯ ಇಲಾಖೆ ಕಾಡಾನೆಗಳನ್ನು ಕಾಡಿಗೆ ಮರಳಿಸುವ ಹಾಗೂ ಶಾಶ್ವತ ನಿಯಂತ್ರಣ ಕ್ರಮ ಕೈಗೊಳ್ಳುವಂತೆ ಸ್ಥಳೀಯರು ಒತ್ತಾಯಿಸಿದ್ದಾರೆ.