ಪೌತಿ ಖಾತೆ ಆಂದೋಲನ ಮತ್ತೆ ಮುಂದುವರಿಸುವAತೆ ಜಿಲ್ಲಾ ಬಿಜೆಪಿ ವತಿಯಿಂದ ಜಿಲ್ಲಾಧಿಕಾರಿ ಎಸ್.ಜೆ. ಸೋಮಶೇಖರ್ ಅವರಿಗೆ ಮನವಿ ಮಾಡಲಾಗಿದೆ. ಈ ಸಂಬAಧ ಈಚೆಗೆ ಜಿಲ್ಲಾಧಿಕಾರಿ ಭೇಟಿ ಮಾಡಿದ್ದ ಬಿಜೆಪಿ ನಿಯೋಗ ಈ ಹಿಂದೆ ರಾಜ್ಯದಲ್ಲಿ ಬಿಜೆಪಿ ಸರ್ಕಾರ ಆಡಳಿತ ನಡೆಸುತಿದ್ದ ಸಂದರ್ಭ ವಿಶೇಷವಾಗಿ ಕೊಡಗಿನ ಜನತೆ ಹಿತದೃಷ್ಟಿಯಿಂದ ಮಾರ್ಗಸೂಚಿಗಳನ್ನು ಬಿಡುಗಡೆ ಮಾಡಲಾಗಿತ್ತು. ಅದರಂತೆ ರೈತಾಪಿ ವರ್ಗದವರ ಸಮಸ್ಯೆಗಳನ್ನು ಪರಿಹರಿಸಿ ಪೌತಿ, ವಾರಸ ಸ್ವರೂಪದ ಮ್ಯೂಟೇಶನ್ ಪ್ರಕ್ರಿಯೇ ಸರಳೀಕೃತಗೊಳಿಸಿ ಪೌತಿ, ವಾರಸ ಖಾತೆ ಆಂದೋಲನ ನಡೆಸಲು ಆಗಿನ ಬಿಜೆಪಿ ಸರ್ಕಾರದಿಂದ ಕೆಲವು ಮಾರ್ಗಸೂಚಿ ರೂಪಿಸಲಾಗಿತ್ತು. ಆ ಮೂಲಕ ನಡೆದಿದ್ದ ಪೌತಿ ಖಾತೆ ಆಂದೋಲನದಿAದಾಗಿ ಕೊಡಗಿನ ಅನೇಕ ರೈತರು ಪ್ರಯೋಜನ ಪಡೆದುಕೊಂಡಿದ್ದರು. ಈ ಆಂದೋಲನವನ್ನು ಮತ್ತೆ ಮುಂದುವರಿಸಿ ರೈತರಿಗೆ ಅನುಕೂಲ ಮಾಡಿಕೊಡುವಂತೆ ಮನವಿ ಮಾಡಿಕೊಳ್ಳಲಾಯಿತು. ಈ ಸಂದರ್ಭ ಜಿಲ್ಲಾಧಿಕಾರಿ ಸಕಾರತ್ಮವಾಗಿ ಸ್ಪಂದಿಸಿದ್ದು ಅಗತ್ಯ ಕ್ರಮ ತೆಗೆದುಕೊಳ್ಳುವುದಾಗಿ ಭರವಸೆ ನೀಡಿದ್ದಾರೆ ಎಂದು ಜಿಲ್ಲಾ ಬಿಜೆಪಿ ಪ್ರಧಾನ ಕಾರ್ಯದರ್ಶಿ ಮಹೇಶ್ ಜೈನಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.