ಹಾಡಿ ಜನರ ಸಮಸ್ಯೆ ಆಲಿಸಿದ ಅಧಿಕಾರಿಗಳ ತಂಡ

ಸೋಮವಾರಪೇಟೆ ತಾಲೂಕಿನ ಹಾರೇಹೊಸೂರು ಗ್ರಾಮದ ಹಾಡಿಗೆ ಆಹಾರ ಇಲಾಖೆಯ ಅಧಿಕಾರಿಗಳು ಹಾಗೂ ಗ್ಯಾರಂಟಿ ಅನುಷ್ಠಾನ ಸಮಿತಿಯ ಪದಾಧಿಕಾರಿಗಳ ತಂಡ  ಭೇಟಿ ನೀಡಿ, ಹಾಡಿ ನಿವಾಸಿಗಳ ಸಮಸ್ಯೆಗಳನ್ನು ಆಲಿಸಿತು. ಯಶಸ್ವಿನಿ, ಸಂದೀಪ್, ರಂಗಸ್ವಾಮಿ ಇದ್ದರು.
ಸೋಮವಾರಪೇಟೆ ತಾಲೂಕಿನ ಹಾರೇಹೊಸೂರು ಗ್ರಾಮದ ಹಾಡಿಗೆ ಆಹಾರ ಇಲಾಖೆಯ ಅಧಿಕಾರಿಗಳು ಹಾಗೂ ಗ್ಯಾರಂಟಿ ಅನುಷ್ಠಾನ ಸಮಿತಿಯ ಪದಾಧಿಕಾರಿಗಳ ತಂಡ ಭೇಟಿ ನೀಡಿ, ಹಾಡಿ ನಿವಾಸಿಗಳ ಸಮಸ್ಯೆಗಳನ್ನು ಆಲಿಸಿತು. ಯಶಸ್ವಿನಿ, ಸಂದೀಪ್, ರಂಗಸ್ವಾಮಿ ಇದ್ದರು.
Published on
ಸೋಮವಾರಪೇಟೆ: ತಾಲೂಕಿನ ಹಾರೇಹೊಸೂರು ಗ್ರಾಮದ ಹಾಡಿಗೆ ಆಹಾರ ಇಲಾಖೆಯ ಅಧಿಕಾರಿಗಳು ಹಾಗೂ ಗ್ಯಾರಂಟಿ ಅನುಷ್ಠಾನ ಸಮಿತಿಯ ಪದಾಧಿಕಾರಿಗಳ ತಂಡ ಶನಿವಾರ ಭೇಟಿ ನೀಡಿ, ನಿವಾಸಿಗಳ ಸಮಸ್ಯೆಗಳನ್ನು ಆಲಿಸಿತು.
ಈ ವೇಳೆ ಹಾಡಿ ಕುಟುಂಬಗಳಿಗೆ ಪಡಿತರ ಚೀಟಿ ಇದಿಯೋ, ಇಲ್ಲವೇ ಎಂಬುದನ್ನು ಪರಿಶೀಲಿಸಿ, ಅರ್ಹರಿಗೆ ಪಡಿತರ ಚೀಟಿ ವಿತರಿಸಲು ಕೈಗೊಳ್ಳಬೇಕಾದ ಕ್ರಮಗಳ ಕುರಿತು ಅಧಿಕಾರಿಗಳು ಮಾಹಿತಿ ನೀಡಿದರು. ಅಲ್ಲದೆ ಕಂದಾಯ ಇಲಾಖೆಯ ವಿವಿಧ ಸರ್ಕಾರಿ ಯೋಜನೆಗಳು ಹಾಗೂ ಅವುಗಳ ಸೌಲಭ್ಯಗಳ ಬಗ್ಗೆ ಗ್ರಾಮ ಆಡಳಿತಾಧಿಕಾರಿ ಅಬ್ದುಲ್ ರಜಾಕ್ ಮಾಹಿತಿ ನೀಡಿದರು.
ಜತೆಗೆ ಮತಗಟ್ಟೆ ಮಟ್ಟದ ಅಧಿಕಾರಿ ವಿಶೇಷ ಮತದಾರರ ಪಟ್ಟಿ ಪರಿಷ್ಕರಣೆ (ಎಸ್‌ಐಆರ್) ಕುರಿತು ಮಾಹಿತಿ ನೀಡಿ, ಅಗತ್ಯ ದಾಖಲೆಗಳನ್ನು ಸಲ್ಲಿಸಿ ಹೆಸರು ಸೇರ್ಪಡೆ ಹಾಗೂ ತಿದ್ದುಪಡಿ ಮಾಡಿಸಿಕೊಳ್ಳುವಂತೆ ಮನವಿ ಮಾಡಿದರು.
ಹಾಡಿ ನಿವಾಸಿಗಳು ಕುಡಿಯುವ ನೀರು, ರಸ್ತೆ ಸೇರಿದಂತೆ ವಿವಿಧ ಮೂಲ ಸೌಲಭ್ಯಗಳ ಸಮಸ್ಯೆಗಳನ್ನು ಅಧಿಕಾರಿಗಳ ಗಮನಕ್ಕೆ ತಂದಿದ್ದು, ಅವುಗಳ ಪರಿಹಾರಕ್ಕೆ ಅಗತ್ಯ ಕ್ರಮ ಕೈಗೊಳ್ಳುವುದಾಗಿ ಅಧಿಕಾರಿಗಳು ಭರವಸೆ ನೀಡಿದರು.
ಈ ಸಂದರ್ಭದಲ್ಲಿ ತಾಲೂಕು ಗ್ಯಾರಂಟಿ ಅನುಷ್ಠಾನ ಸಮಿತಿ ಅಧ್ಯಕ್ಷ ಕಾಂತರಾಜು, ಸಮಿತಿ ಸದಸ್ಯ ಸಂದೀಪ್ ಹಾರೇಹೊಸೂರು, ರಂಗಸ್ವಾಮಿ, ಆಹಾರ ನಿರೀಕ್ಷಕಿ ಯಶಸ್ವಿನಿ, ಸಿಬ್ಬಂದಿ ಯಲ್ಲಾಲಿಂಗ, ವಿನೋದ್ ಕುಮಾರ್, ಹಾಡಿ ಮುಖ್ಯಸ್ಥ ಗಣೇಶ್ ಮತ್ತಿತರರು ಇದ್ದರು.
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net