ಆಹಾರ ಸುರಕ್ಷತೆ ಮತ್ತು ಗುಣಮಟ್ಟ ಇಲಾಖೆ ಅಂಕಿತಾಧಿಕಾರಿ ಡಾ.ಅನಿಲ್ ಧಾವನ್ ಹಾಗೂ ಆಹಾರ ಇಲಾಖೆಯ ಉಪ ನಿರ್ದೇಶ ಭೀಮರಾಯ ಕಲ್ಲೂರ್, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಉಪ ನಿರ್ದೇಶಕರಾದ ಪ್ರಸನ್ನ ಕುಮಾರ್, ಕೊಡಗು ವೈದ್ಯಕೀಯ ವಿಜ್ಞಾನ ಸಂಸ್ಥೆಯ ಡೀನ್ ಮತ್ತು ನಿರ್ದೇಶಕರಾದ ಡಾ.ಎ.ಜೆ.ಲೋಕೇಶ್, ಡಾ.ನಂಜುಂಡಯ್ಯ, ಡಾ.ಸೋಮಶೇಖರ್, ಡಾ.ಅಭಿನಂದನ್, ಡಾ.ಪುರುಷೋತ್ತಮ, ಆಹಾರ ಇಲಾಖೆಯ ಉಪ ನಿರ್ದೇಶಕರಾದ ಐಟಿಡಿಪಿ ಇಲಾಖಾ ಅಧಿಕಾರಿ ಹೊನ್ನೇಗೌಡ, ಸಮಾಜ ಕಲ್ಯಾಣ ಇಲಾಖೆ ಉಪ ನಿರ್ದೇಶಕರಾದ ಶೇಖರ್, ಇತರರು ತಮ್ಮ ಇಲಾಕೆಗೆ ಸಂಬಂಧಿಸಿದಂತೆ ಹಲವು ಮಾಹಿತಿ ನೀಡಿದರು. ರಾಜ್ಯ ಆಹಾರ ಆಯೋಗದ ಸದಸ್ಯರ ತಂಡವು ಸೋಮವಾರಪೇಟೆ, ವಿರಾಜಪೇಟೆ, ಪೊನ್ನಂಪೇಟೆ ಹಾಗೂ ಕುಶಾಲನಗರ ತಾಲ್ಲೂಕುಗಳಿಗೆ ಭೇಟಿ ಪರಿಶೀಲಿಸಿ, ಮಾಹಿತಿ ಪಡೆದರು.