ಸಾಮಾಜಿಕ ಕಳಕಳಿ, ಕೊಡಗಿನ ಅಭ್ಯುದಯದ ಕಾಳಜಿ, ಸಂಸ್ಕೃತಿ, ಸಾಹಿತ್ಯ ಬೆಳೆವಣಿಗೆಯ ಮೇಲಿನ ಆಸಕ್ತಿಯಿಂದ ನಿರಂತರ ಕಾರ್ಯನಿರ್ವಹಣೆಯಲ್ಲಿ ತೊಡಗಿರುವ ಕೊಡವ ಮಕ್ಕಡ ಕೂಟ ಈವರೆಗೆ ಜಿಲ್ಲೆಯ ಬರಹಗಾರರು, ಸಾಹಿತಿಗಳು ಬರೆದ ಕೊಡವ, ಕನ್ನಡ, ಇಂಗ್ಲೀಷ್, ಹಿಂದಿ ಸೇರಿದಂತೆ ಹಲವು ಕೃತಿಗಳನ್ನು ಬಿಡುಗಡೆ ಮಾಡಲಾಗಿದೆ. ಈಗಾಗಲೇ ಮಹಾತ್ವಾಕಾಂಕ್ಷೆಯ ೧೨೧ ಪುಸ್ತಕಗಳನ್ನು ಸಾಹಿತ್ಯ ಕ್ಷೇತ್ರಕ್ಕೆ ಸಮರ್ಪಿಸಲಾಗಿದೆ ಎಂದು ತಿಳಿಸಿದರು.