

ನಾಪೋಕ್ಲು: ಇಲ್ಲಿನ ಕರ್ನಾಟಕ ಪಬ್ಲಿಕ್ ಶಾಲೆಯ ಆವರಣದಲ್ಲಿ ಶಾಲಾ ಶಿಕ್ಷಣ ಇಲಾಖೆ ಮತ್ತು ಅಂಚೆ ಕಚೇರಿ ಸಹಯೋಗದಲ್ಲಿ ಸೋಮವಾರ ಮತ್ತು ಮಂಗಳವಾರ ಆಧಾರ್ ತಿದ್ದುಪಡಿ ಶಿಬಿರ ಆಯೋಜಿಸಲಾಗಿತ್ತು. ವಿದ್ಯಾರ್ಥಿಗಳ ವರ್ಗಾವಣೆ ಪತ್ರ, ಶಾಲಾ ದಾಖಲಾತಿ ಮಾಹಿತಿ ಹಾಗೂ ಆಧಾರ್ ಕಾರ್ಡ್‌ಗಳಲ್ಲಿನ ಮಾಹಿತಿಗಳು ಸರಿ ಹೊಂದದೆ ಇರುವುದರಿಂದ ನ್ಯೂನತೆಗಳನ್ನು ಸರಿಪಡಿಸುವ ಉದ್ದೇಶದಿಂದ ಶಿಬಿರವನ್ನು ಆಯೋಜಿಸಲಾಗಿತ್ತು. ನಾಪೋಕ್ಲು ಕ್ಲಸ್ಟರ್ ವ್ಯಾಪ್ತಿಯ ವಿವಿಧ ಶಾಲೆಗಳಲ್ಲಿ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿಗಳು, ಪಾಲಕರು ಶಿಬಿರದಲ್ಲಿ ಪಾಲ್ಗೊಂಡಿದ್ದರು.