ಆಟೋ -ಜೀಪು ಭೀಕರ ಅಪಘಾತ; ನಾಲ್ವರಿಗೆ ಗಂಭೀರ ಗಾಯ

 ಸಿದ್ದಾಪುರ ಸಮೀಪದ ಅಭ್ಯತ್ ಮಂಗಲ (ಒಂಟಿಯಂಗಡಿ) ಬಳಿ ಆಟೋ ರಿಕ್ಷಾ ಹಾಗೂ ಜೀಪು ನಡುವೆ ಭೀಕರ ರಸ್ತೆ ಅಪಘಾತ
ಸಿದ್ದಾಪುರ ಸಮೀಪದ ಅಭ್ಯತ್ ಮಂಗಲ (ಒಂಟಿಯಂಗಡಿ) ಬಳಿ ಆಟೋ ರಿಕ್ಷಾ ಹಾಗೂ ಜೀಪು ನಡುವೆ ಭೀಕರ ರಸ್ತೆ ಅಪಘಾತ
Published on
ಸಿದ್ದಾಪುರ : ಸಿದ್ದಾಪುರ ಸಮೀಪದ ಅಭ್ಯತ್ ಮಂಗಲ (ಒಂಟಿಯಂಗಡಿ) ಬಳಿ ಆಟೋ ರಿಕ್ಷಾ ಹಾಗೂ ಜೀಪು ನಡುವೆ ಭಾನುವಾರ ಸಂಜೆ ಭೀಕರ ರಸ್ತೆ ಅಪಘಾತ ಸಂಭವಿಸಿದ್ದು, ಆಟೋ ಚಾಲಕ ಸೇರಿದಂತೆ ಆಟೋದಲ್ಲಿದ್ದ ಮೂವರು ಪ್ರಯಾಣಿಕರಿಗೆ ಗಂಭೀರ ಗಾಯಗಳಾಗಿವೆ.
ಜೀಪ್ ಚಾಲಕನ ನಿರ್ಲಕ್ಷ್ಯವೇ ಅಪಘಾತಕ್ಕೆ ಕಾರಣವೆಂದು ತಿಳಿದುಬಂದಿದ್ದು, ಡಿಕ್ಕಿಯ ರಭಸಕ್ಕೆ ಆಟೋ ರಿಕ್ಷಾ ಸಂಪೂರ್ಣವಾಗಿ ನಜ್ಜುಗುಜ್ಜಾಗಿದೆ. ಅಪಘಾತದ ಮಾಹಿತಿ ಪಡೆದ ಚೆಟ್ಟಳ್ಳಿ ಪೊಲೀಸ್ ಠಾಣಾಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.
ಗಾಯಾಳುಗಳನ್ನು ತಕ್ಷಣ ಸಿದ್ದಾಪುರ ಸಮುದಾಯ ಆರೋಗ್ಯ ಕೇಂದ್ರಕ್ಕೆ ದಾಖಲಿಸಿ ಪ್ರಥಮ ಚಿಕಿತ್ಸೆ ನೀಡಲಾಗಿದ್ದು, ಬಳಿಕ ಹೆಚ್ಚಿನ ಚಿಕಿತ್ಸೆಗಾಗಿ ಮಡಿಕೇರಿ ಜಿಲ್ಲಾಸ್ಪತ್ರೆಗೆ ರವಾನಿಸಲಾಗಿದೆ.
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net