ಅಟಲ್ ಬಿಹಾರಿ ವಾಜಪೇಯಿ ವಸತಿ ಶಾಲೆ ಮಕ್ಕಳ ಸಾಧನೆ

ಕೋರಂಗಾಲದ ಜ್ಞಾನೋದಯ ಆಂಗ್ಲ ಮಾಧ್ಯಮ ಶಾಲೆಯಲ್ಲಿ ನಡೆದ ವಲಯ ಮಟ್ಟದ ಪ್ರತಿಭಾ ಕಾರಂಜಿ ಸ್ಪರ್ಧೆಯಲ್ಲಿ ಉತ್ತಮ ಸಾಧನೆ ಪ್ರದರ್ಶಿಸಿದ ಭಾಗಮಂಡಲದ ಅಟಲ್ ಬಿಹಾರಿ ವಾಜಪೇಯಿ ವಸತಿ ಶಾಲೆಯ ಮಕ್ಕಳು. ಶಾಲೆಯ ಶಿಕ್ಷಕರು ಇದ್ದರು.
ಕೋರಂಗಾಲದ ಜ್ಞಾನೋದಯ ಆಂಗ್ಲ ಮಾಧ್ಯಮ ಶಾಲೆಯಲ್ಲಿ ನಡೆದ ವಲಯ ಮಟ್ಟದ ಪ್ರತಿಭಾ ಕಾರಂಜಿ ಸ್ಪರ್ಧೆಯಲ್ಲಿ ಉತ್ತಮ ಸಾಧನೆ ಪ್ರದರ್ಶಿಸಿದ ಭಾಗಮಂಡಲದ ಅಟಲ್ ಬಿಹಾರಿ ವಾಜಪೇಯಿ ವಸತಿ ಶಾಲೆಯ ಮಕ್ಕಳು. ಶಾಲೆಯ ಶಿಕ್ಷಕರು ಇದ್ದರು.
Published on
ಮಡಿಕೇರಿ:
ಕೋರಂಗಾಲದ ಜ್ಞಾನೋದಯ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಮಂಗಳವಾರ ನಡೆದ ವಲಯ ಮಟ್ಟದ ಪ್ರತಿಭಾ ಕಾರಂಜಿ ಸ್ಪರ್ಧೆಯಲ್ಲಿ ಭಾಗಮಂಡಲದ ಅಟಲ್ ಬಿಹಾರಿ ವಾಜಪೇಯಿ ವಸತಿ ಶಾಲೆಯ ಮಕ್ಕಳು ಹಲವು ಪ್ರಶಸ್ತಿಗಳನ್ನು ಗೆದ್ದುಕೊಂಡಿದ್ದಾರೆ.
ಇಂಗ್ಲೀಷ್ ಭಾಷಣ ಸ್ಪರ್ಧೆಯಲ್ಲಿ ಎಚ್.ಆರ್. ಪ್ರಜ್ಞಾ, ಕ್ಲೇ ಮಾಡಲಿಂಗ್‌ನಲ್ಲಿ ಬಿ.ಆರ್. ಚಂದನ್, ಮಿಮಿಕ್ರಿಯಲ್ಲಿ ಎ.ಜೆ. ದಿಲನ್, ರಸಪ್ರಶ್ನೆಯಲ್ಲಿ
ರೋಷನ್ ದೇಶ್ ಪ್ರೇಮ್ ಮತ್ತು ಚಂದ್ರಶೇಖರ್ ಪಟೇಲ್, ಅಭಿನಯ ಗೀತೆಯಲ್ಲಿ ನೇಹಾಶ್ರೀ ಪ್ರಥಮ ಬಹುಮಾನ ಗೆದ್ದುಕೊಂಡಿದ್ದಾರೆ.
ಕನ್ನಡ ಭಾಷಣ ಸ್ಪರ್ಧೆಯಲ್ಲಿ ಪಿ.ಎಲ್. ಹಿತಾಶ್ರೀ, ಹಿಂದಿ ಭಾಷಣ ಸ್ಪರ್ಧೆಯಲ್ಲಿ ಪಿ.ಎಂ. ಡಯಾನ, ಭಾವಗೀತೆ ಸ್ಪರ್ಧೆಯಲ್ಲಿ ಬಿ.ಡಿ. ಪೃಥ್ವಿ
ಜಾನಪದ ನೃತ್ಯ ಸ್ಪರ್ಧೆಯಲ್ಲಿ ಕೀರ್ತಿ ಮತ್ತು ತಂಡ, ರಂಗೋಲಿಯಲ್ಲಿ ಲಕ್ಷಿö್ಮÃ ದ್ವಿತೀಯ ಸ್ಥಾನ ಪಡೆದುಕೊಂಡಿದ್ದಾರೆ.
ಜಾನಪದ ಗೀತೆಯಲ್ಲಿ ಸಿಂಚನ, ಆಶುಭಾಷಣ ಸ್ಪರ್ಧೆಯಲ್ಲಿ ಎಚ್.ಪಿ. ದೇವಿಕಾ, ಕಥೆ ಹೇಳುವ ಸ್ಪರ್ಧೆಯಲ್ಲಿ ನೇಹಾಶ್ರೀ ತೃತೀಯ ಬಹುಮಾನ ಗಳಿಸಿದ್ದಾರೆ ಎಂದು ಶಾಲೆಯ ಪ್ರಕಟಣೆ ತಿಳಿಸಿದೆ.
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net