ಕರಾಟೆಯಲ್ಲಿ ಜ್ಞಾನೋದಯ ಶಾಲೆ ಮಕ್ಕಳ ಸಾಧನೆ

ಅಂತಾರಾಷ್ಟ್ರೀಯ ಶೋಲಿಂಗ್ ಕುಂಗ್ಫು ಸಂಸ್ಥೆ ವತಿಯಿಂದ ಭಾಗಮಂಡಲ ಜ್ಞಾನೋದಯ ಶಾಲೆಯಲ್ಲಿ ಆಯೋಜಿಸಿದ್ದ ಕರಾಟೆ ಪರೀಕ್ಷೆಯಲ್ಲಿ ಸಾಧನೆ ಮಾಡಿದ ವಿದ್ಯಾರ್ಥಿಗಳನ್ನು ಅಭಿನಂದಿಸಲಾಯಿತು.
ಅಂತಾರಾಷ್ಟ್ರೀಯ ಶೋಲಿಂಗ್ ಕುಂಗ್ಫು ಸಂಸ್ಥೆ ವತಿಯಿಂದ ಭಾಗಮಂಡಲ ಜ್ಞಾನೋದಯ ಶಾಲೆಯಲ್ಲಿ ಆಯೋಜಿಸಿದ್ದ ಕರಾಟೆ ಪರೀಕ್ಷೆಯಲ್ಲಿ ಸಾಧನೆ ಮಾಡಿದ ವಿದ್ಯಾರ್ಥಿಗಳನ್ನು ಅಭಿನಂದಿಸಲಾಯಿತು.
Published on

ಪ್ರಮುಖ ಮುಖ್ಯಾಂಶಗಳು

  • ಕರಾಟೆ ಪರೀಕ್ಷೆ
  • ವಿವಿಧ ಹಂತಗಳಲ್ಲಿ ಸಾಧನೆ
ನಾಪೋಕ್ಲು: ಭಾಗಮಂಡಲ ಜ್ಞಾನೋದಯ ಶಾಲೆಯ ವಿದ್ಯಾರ್ಥಿಗಳು ಕರಾಟೆ ಪರೀಕ್ಷೆಯಲ್ಲಿ ಭಾಗವಹಿಸಿ ವಿವಿಧ ಹಂತಗಳಲ್ಲಿ ಸಾಧನೆ ಮಾಡಿದ್ದಾರೆ. 
ಅಂತಾರಾಷ್ಟ್ರೀಯ ಶೋಲಿಂಗ್ ಕುಂಗ್ಫು ಸಂಸ್ಥೆ ವತಿಯಿಂದ ಭಾಗಮಂಡಲ ಜ್ಞಾನೋದಯ ಶಾಲೆಯಲ್ಲಿ ಆಯೋಜಿಸಿದ್ದ ಕರಾಟೆ ಪರೀಕ್ಷೆಯಲ್ಲಿ ಒಟ್ಟು 29 ವಿದ್ಯಾರ್ಥಿಗಳು ಭಾಗವಹಿಸಿದ್ದು ಹನ್ನೆರಡು ವಿದ್ಯಾರ್ಥಿಗಳು ಹಳದಿ, ಹನ್ನೆರಡು ವಿದ್ಯಾರ್ಥಿಗಳು ಆರೆಂಜ್, ಐದು ವಿದ್ಯಾರ್ಥಿಗಳು ಹಸಿರು ಬೆಲ್ಟ್ ಪಡೆದು ಉತ್ತಮ ಸಾಧನೆ ಮಾಡಿದರು.
ಈ ಸಂದರ್ಭದಲ್ಲಿ ಪರೀಕ್ಷಾರ್ಥಿಗಳಾಗಿ ಇಂಡಿಯನ್ ಗ್ರಾೃಂಡ್ ಮಾಸ್ಟರ್ ಶಿಫು ಇಂದ್ರಜಿತ್, ಇಂಡಿಯನ್ ತರಬೇತುದಾರರಾದ ದೇವರಾಜ್, ಕೊಡಗು ಜಿಲ್ಲೆಯ ತರಬೇತುದಾರರಾದ ವೇಣು ಗೋಪಾಲ್, ಕರ್ನಾಟಕ ರಾಜ್ಯದ ತರಬೇತುದಾರರಾದ ನಾಟೋಳಂಡ ನಂಜುಂಡ ಪಾಲ್ಗೊಂಡಿದ್ದರು. ಉತ್ತಿರ್ಣರಾದ ವಿದ್ಯಾರ್ಥಿಗಳಿಗೆ ವಿದ್ಯಾಸಂಸ್ಥೆಯ ಮುಖ್ಯ ಶಿಕ್ಷಕರಾದ ಚೀಯಕ್ ಪೂವಂಡ ಶ್ವೇತನ್ ಚಂಗಪ್ಪ ಹಾಗೂ ದೈಹಿಕ ಶಿಕ್ಷಣ ಶಿಕ್ಷಕರಾದ ಮುಕ್ಕಾಟಿರ ಶಿಶಿರ್ ಮುತ್ತಪ್ಪ ಮಾರ್ಗದರ್ಶನ ನೀಡಿದ್ದರು.
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net