ನಾಪೋಕ್ಲು: ಸಮೀಪದ ಚೇರಂಬಾಣೆಯ ಶ್ರೀ ರಾಜರಾಜೇಶ್ವರಿ ಶಾಲೆ ವಿದ್ಯಾರ್ಥಿಗಳು ಕರಾಟೆ ಪರೀಕ್ಷೆಯಲ್ಲಿ ಉತ್ತಮ ಸಾಧನೆ ಮಾಡಿದ್ದಾರೆ.
ಅಂತಾರಾಷ್ಟ್ರೀಯ ಶೋಲಿಂಗ್ ಕುಂಗ್ಫು ಸಂಸ್ಥೆ ವತಿಯಿಂದ ಚೇರಂಬಾಣೆಯ ಶ್ರೀ ರಾಜರಾಜೇಶ್ವರಿ ಶಾಲೆಯಲ್ಲಿ ಆಯೋಜಿಸಿದ್ದ ಕರಾಟೆ ಪರೀಕ್ಷೆಯಲ್ಲಿ ಒಂಬತ್ತನೇ ತರಗತಿ ವಿದ್ಯಾರ್ಥಿಗಳಾದ ಬಿ.ಎ.ಅಂಕಿತ್ ಬ್ಲಾಕ್ ಬೆಲ್ಟ್ ಪ್ರಥಮ ಡಿಗ್ರಿ, ಕೆ.ಎ.ಲಕ್ಷಣ್ ಹಾಗೂ ಮೋನಿಷ್ ಮುತ್ತಣ್ಣ ಬ್ಲ್ಯಾಕ್ ಬೆಲ್ಟ್ ಪಡೆದಿದ್ದಾರೆ.
ಒಟ್ಟು 33 ವಿದ್ಯಾರ್ಥಿಗಳು ಭಾಗವಹಿಸಿದ್ದ ಪರೀಕ್ಷೆಯಲ್ಲಿ ಹನ್ನೊಂದು ವಿದ್ಯಾರ್ಥಿಗಳು ಹಳದಿ, ಎಂಟು ವಿದ್ಯಾರ್ಥಿಗಳು ಆರೆಂಜ್, ಒಬ್ಬ ವಿದ್ಯಾರ್ಥಿ ಹಸಿರು, ಏಳು ವಿದ್ಯಾರ್ಥಿಗಳು ನೀಲಿ, ಆರು ವಿದ್ಯಾರ್ಥಿಗಳು ಬ್ರೌನ್ ಬೆಲ್ಟ್ ಪಡೆದು ಸಾಧನೆ ಮಾಡಿದ್ದಾರೆ.
ಪರೀಕ್ಷಾರ್ಥಿಗಳಾಗಿ ಇಂಡಿಯನ್ ಗ್ರಾೃಂಡ್ ಮಾಸ್ಟರ್ ಶಿಫು ಇಂದ್ರಜಿತ್, ಇಂಡಿಯನ್ ತರಬೇತುದಾರರಾದ ದೇವರಾಜ್, ಕೊಡಗು ಜಿಲ್ಲಾ ತರಬೇತುದಾರರಾದ ವೇಣು ಗೋಪಾಲ್, ರಾಜ್ಯದ ತರಬೇತುದಾರರಾದ ನಾಟೋಳಂಡ ನಂಜುಂಡ ಪಾಲ್ಗೊಂಡಿದ್ದರು. ವಿದ್ಯಾಸಂಸ್ಥೆಯ ವ್ಯವಸ್ಥಾಪಕರಾದ ನಾಟೋಳಂಡ ವಿಜು ಹಾಗೂ ಮುಖ್ಯ ಶಿಕ್ಷಕರಾದ ಕುದುಪಜೆ ಕವನ್ ಮಾರ್ಗದರ್ಶನ ನೀಡಿದರು.